ಭಾನುವಾರ, ಏಪ್ರಿಲ್ 11, 2021
22 °C

ನಗರಕ್ಕೆ ಆಗಮಿಸಿದ ಸೂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಗರಕ್ಕೆ ಆಗಮಿಸಿದ ಸೂಕಿ

ಬೆಂಗಳೂರು:  ಮ್ಯಾನ್ಮಾರ್‌ನ ಪ್ರಜಾಪ್ರಭುತ್ವ ಹೋರಾಟಗಾರ್ತಿ ಆಂಗ್ ಸಾನ್ ಸೂಕಿ ಅವರು ಶುಕ್ರವಾರ ರಾತ್ರಿ ಒಂಬತ್ತು ಗಂಟೆಗೆ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.`ನಗರದ ಲೀಲಾ ಪ್ಯಾಲೇಸ್ ಹೋಟೆಲ್‌ನಲ್ಲಿ ಶುಕ್ರವಾರ ರಾತ್ರಿ ವಾಸ್ತವ್ಯ ಹೂಡಲಿರುವ ಸೂಕಿ, ಶನಿವಾರ ಬೆಳಿಗ್ಗೆ ಒಂಬತ್ತು ಗಂಟೆಗೆ ಆಂಧ್ರಪ್ರದೇಶಕ್ಕೆ ತೆರಳಲಿದ್ದಾರೆ. ಅಲ್ಲಿಂದ ಮಧ್ಯಾಹ್ನ 12.30ಕ್ಕೆ ನಗರಕ್ಕೆ ವಾಪಸಾಗಲಿರುವ ಅವರು, ಮೂರು ಗಂಟೆಗೆ ಭಾರತೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಲಿದ್ದಾರೆ.ಬಳಿಕ ಐದು ಗಂಟೆಗೆ ಇನ್ಫೋಸಿಸ್ ಸಂಸ್ಥೆಗೆ ಭೇಟಿ ನೀಡಿ, ಹೋಟೆಲ್‌ಗೆ ಮರಳಲಿದ್ದಾರೆ. ರಾತ್ರಿ 8.30ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣದ ಮೂಲಕ ಹಾಂಗ್‌ಕಾಂಗ್‌ಗೆ ತೆರಳಲಿದ್ದಾರೆ~ ಎಂದು ವಿಶೇಷ ಗಣ್ಯ ವ್ಯಕ್ತಿಗಳ ಭದ್ರತಾ ವಿಭಾಗದ ಡಿಸಿಪಿ ಎ.ಎನ್.ಎಸ್. ಸ್ವಾಮಿ `ಪ್ರಜಾವಾಣಿ~ ಗೆ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.