ನಗರದಲ್ಲಿ ಮತ್ತೊಂದು ಅಗ್ನಿ ಅನಾಹುತ

7

ನಗರದಲ್ಲಿ ಮತ್ತೊಂದು ಅಗ್ನಿ ಅನಾಹುತ

Published:
Updated:

ಬೆಂಗಳೂರು: ನಗರದ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿರುವ ವಿದ್ಯಾ ಹರ್ಬಲ್ ಎಂಬ ರಾಸಾಯನಿಕ ಕಾರ್ಖಾನೆಯಲ್ಲಿ ಶನಿವಾರ ಉಂಟಾದ  ಅಗ್ನಿ ಅನಾಹುತದಲ್ಲಿ ನಾಲ್ವರು ಗಾಯಗೊಂಡು, ಒಬ್ಬ ಮೃತಪಟ್ಟಿದ್ದಾನೆ ಎಂದು ಶಂಕಿಸಲಾದ ಘಟನೆ ನಡೆದಿದೆ.

 

ಕಾರ್ಖಾನೆಯಲ್ಲಿರುವ ಬಾಯ್ಲರ್ ಸಿಲಿಂಡರ್ ಸ್ಪೋಟದಿಂದಾಗಿ ಈ ಅಗ್ನಿ ಆಕಸ್ಮಿಕ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಸುದ್ಧಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಿವೆ, ಘಟನೆಯಲ್ಲಿ ಕಾರ್ಖಾನೆಯ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಅಗ್ನಿ ಶಾಮಕ ದಳದ ನಿರ್ದೇಶಕ ಚಂಗಪ್ಪ ತಿಳಿಸಿದ್ದಾರೆ.

 

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಶುಕ್ರವಾರವಷ್ಟೇ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಪಾದರಕ್ಷೆ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ಕೋಟ್ಯಂತರ ಮೌಲ್ಯದ ವಸ್ತುಗಳು ಸುಟ್ಟುಹೋದ ಘಟನೆ ಇಲ್ಲಿ ಸ್ಮರಿಸಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry