ಬುಧವಾರ, ಮೇ 25, 2022
30 °C
ಬೋಧಗಯಾ ಸ್ಫೋಟಕ್ಕೆ ಖಂಡನೆ

ನಗರದಲ್ಲಿ ಮೇಣದ ಬತ್ತಿ ಮೆರವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಬಿಹಾರದ ಬೋಧಗಯಾದಲ್ಲಿನ ಮಹಾಬೋಧಿ ವಿಹಾರದಲ್ಲಿ ಬಾಂಬ್ ಸ್ಫೋಟ ನಡೆಸಿರುವುದನ್ನು ಖಂಡಿಸಿ ತ್ರಿರತ್ನ ಬೌದ್ಧ ಮಹಾಸಂಘದ ವತಿಯಿಂದ ಮಂಗಳವಾರ ನಗರದಲ್ಲಿ ಮೇಣದಬತ್ತಿ ಮೆರವಣಿಗೆ ನಡೆಸಲಾಯಿತು.ಬೌದ್ಧರ ಧಾರ್ಮಿಕ ಕೇಂದ್ರವಾದ ಬಿಹಾರದ ಬೋಧಗಯಾದಲ್ಲಿ ದುಷ್ಕರ್ಮಿಗಳ ವಿಧ್ವಂಸಕ ಕೃತ್ಯದಿಂದ ಬೋಧಿವೃಕ್ಷಕ್ಕೂ ಹಾನಿಯಾಗಿದೆ.

ಈ ದಾಳಿಯಲ್ಲಿ ಅನೆಕ ವಿದೇಶಿ ಬೌದ್ಧ ಗುರುಗಳು ಗಾಯಗೊಂಡಿದ್ದಾರೆ.ಇದರಿಂದ ಇಲ್ಲಿಗೆ ಬರುವ ಭಕ್ತರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಕಳವಳ ವ್ಯಕ್ತಪಡಿಸಿದರು.

ಇಂತಹ ಕೃತ್ಯಗಳಿಂದ ಶಾಂತಿಗೆ ಹೆಸರಾದ ಬೋಧಗಯಾದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ.ಈ ಕೃತ್ಯದಲ್ಲಿ ಭಾಗಿಯಾದ ಯಾವುದೇ ವ್ಯಕ್ತಿ ಅಥವಾ ಸಂಘಟನೆಯನ್ನು ಗುರುತಿಸಿ ಉಗ್ರ ಶಿಕ್ಷೆಗೆ ಒಳಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಕರ್ನಾಟಕದಲ್ಲಿರುವ ಎಲ್ಲ ಬೌದ್ಧ ವಿಹಾರಗಳಿಗೂ ಸೂಕ್ತ ರಕ್ಷಣೆ ಒದಗಿಸುವಂತೆ ಅವರು ಆಗ್ರಹಿಸಿದರು.ನಗರದ ಜಗತ್ ವೃತ್ತದಲ್ಲಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಸಿದ್ಧಾರ್ಥ ಬುದ್ಧ ವಿಹಾರದ ಸಂಘಾನಂದ ಭಂತೇಜಿಯವರ ನೇತೃತ್ವದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.ಬಳಿಕ ಜಗತ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಮೌನ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ            ಸಲ್ಲಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.