ಮೈಸೂರು: ಅಂಬೇಡ್ಕರ್ ಸಂಸ್ಮರಣಾ ದಿನಾಚರಣೆ ಆಚರಿಸಲು ಅವಕಾಶ ನೀಡದ ಪ್ರಾಂಶುಪಾಲರನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿ ಯುವರಾಜ ಕಾಲೇಜು ವಿದ್ಯಾರ್ಥಿಗಳು ಬುಧವಾರ ತರಗತಿ ಬಹಿಷ್ಕರಿಸಿ ಕಾಲೇಜು ಆವರಣದಲ್ಲಿ ಪ್ರತಿಭಟನೆ ಮಾಡಿದರು.

ಕಾಲೇಜು ಆವರಣದಲ್ಲಿ ಜಮಾಯಿಸಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರಾಂಶುಪಾಲರಾದ ಸ.ನ.ಗಾಯತ್ರಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಂಬೇಡ್ಕರ್ ಸಂಸ್ಮರಣಾ ದಿನಾಚರಣೆ ಆಚರಿಸುವ ಸಲುವಾಗಿ ಪ್ರಾಂಶುಪಾಲರನ್ನು ಭೇಟಿ ಮಾಡಿದ ವಿದ್ಯಾರ್ಥಿಗಳನ್ನು ಅವರು ನಿಂದಿಸಿದ್ದಾರೆ. ಒಂದೂವರೆ ತಿಂಗಳಿಂದ ಸಂಸ್ಮರಣಾ ದಿನ ಆಚರಿಸಲು ವಿಳಂಬ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ಪ್ರಾಂಶುಪಾಲರು ಜಾತಿಯ ಮೇಲೆ ವಿದ್ಯಾರ್ಥಿಗಳನ್ನು ವಿಂಗಡಿಸುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳಲ್ಲಿ ಜಾತಿಯ ವಿಷ ಬೀಜ ಬಿತ್ತಲಾಗುತ್ತಿದೆ. ಎಲ್ಲರು ಒಗ್ಗಟ್ಟಿನಿಂದ ಹಿಂದಿನಂತೆ ಅಂಬೇಡ್ಕರ್ ಸಂಸ್ಮರಣಾ ದಿನಾಚರಣೆ ಆಚರಿಸಲು ಅವಕಾಶ ಮಾಡಿಕೊಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವಿ.ಜಿ.ತಳವಾರ್ ಅವರು ಮಾತನಾಡಿ, `15 ದಿನಗಳ ಒಳಗೆ ಸಮಸ್ಯೆಯನ್ನು ಬಗೆಹರಿಸಲಾಗುವುದು. ಅಲ್ಲಿಯವರೆಗೆ ವಿದ್ಯಾರ್ಥಿಗಳು ತರಗತಿಗಳಿಗೆ ಹೋಗಬೇಕು. ಅಂಬೇಡ್ಕರ್ ಅವರ ಸಂಸ್ಮರಣಾ ದಿನಾಚರಣೆಯನ್ನು ಆಚರಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು~ ಎಂದು ಭರವಸೆ ನೀಡಿದರು. ಬಳಿಕ ಪ್ರತಿಭಟನೆಯನ್ನು ಕೈಬಿಡಲಾಯಿತು.

ಮಾಜಿ ಮೇಯರ್ ಎಂ.ಪುರುಷೋತ್ತಮ, ಬಹುಜನ ವಿದ್ಯಾರ್ಥಿ ಸಂಘದ ಮಹೇಶ್ ಇದ್ದರು.

ಶಿಕ್ಷಕಿ ಅಮಾನತಿಗೆ ಒತ್ತಾಯ
ಸರ್ಕಾರಕ್ಕೆ ತಪ್ಪು ಮಾಹಿತಿ ನೀಡುತ್ತಿರುವ ಶಿಕ್ಷಕಿಯನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಕಾವಲುಪಡೆ ಕಾರ್ಯಕರ್ತರು ನಗರದ ಬಿಇಓ ಕಚೇರಿ (ಉತ್ತರ ವಲಯ) ಎದುರು ಪ್ರತಿಭಟನೆ ಮಾಡಿದರು.

ಉತ್ತರ ವಲಯದಲ್ಲಿ ಬರುವ ಎಸ್.ಜಿ.ಕರೀಂ ಬ್ಲಾಕ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ.ಮಹಾಲಕ್ಷ್ಮಿ ಎಂಬುವರು ಕಳೆದ 18 ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಶಾಲೆಗೆ ಸುಮಾರು 90 ಮಕ್ಕಳು ಹಾಜರಾಗುತ್ತಿದ್ದಾರೆ. ಆದರೆ 140 ಮಕ್ಕಳು ಹಾಜರಾಗುತ್ತಿರುವುದಾಗಿ ಸರ್ಕಾರಕ್ಕೆ ಸುಳ್ಳು ಲೆಕ್ಕ ನೀಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಶೌಚಾಲಯದ ನೀರನ್ನೇ ಅಡುಗೆ ಮತ್ತು ಕುಡಿಯಲು ಮಕ್ಕಳು ಬಳಸುತ್ತಿದ್ದಾರೆ. ಇದನ್ನು ಪ್ರಶ್ನಿಸಿದ ಪೋಷಕರಿಗೆ ಮುಖ್ಯ ಶಿಕ್ಷಕಿ ಹರಿಹಾಯುತ್ತಾರೆ. ದೌರ್ಜನ್ಯ ಮತ್ತು ನಿರ್ಲಕ್ಷ್ಯತನ ತೋರುತ್ತಿರುವ ಮುಖ್ಯ ಶಿಕ್ಷಕಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಣ ಸಚಿವರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬಳಿಕ ಮನವಿ ಪತ್ರ ಸಲ್ಲಿಸಲಾಯಿತು. ಕಾವಲುಪಡೆ ರಾಜ್ಯ ಉಪಾಧ್ಯಕ್ಷ ಟಿ.ರವಿಗೌಡ, ಎನ್.ಆರ್.ಕ್ಷೇತ್ರದ ಅಧ್ಯಕ್ಷ ಎಂ.ಸಿ.ಬಾಬು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಸಿಪಿಐ(ಎಂ) ಪ್ರತಿಭಟನೆ
ದಲಿತರಿಗೆ ಅಂತ್ಯೋದಯ ಕಾರ್ಡ್ಗಳನ್ನು ವಿತರಿಸಬೇಕು ಎಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ದಲಿತರು ಹಸಿವಿನಿಂದ ಬಳಲುತ್ತಿದ್ದಾರೆ. ಸಾಕಷ್ಟು ಮಂದಿಗೆ ಅಂತ್ಯೋದಯ ಕಾರ್ಡ್ ಇಲ್ಲದೆ ಪರದಾಡುತ್ತಿದ್ದಾರೆ. ಹಾಗಾಗಿ ಪ್ರತಿಯೊಬ್ಬರಿಗೂ ಅಂತ್ಯೋದಯ ಕಾರ್ಡ್ಗಳನ್ನು ನೀಡಬೇಕು. ಇಲ್ಲವೆ ದಲಿತರನ್ನು ಆಹಾರ ಭದ್ರತೆ ಕಾಯ್ದೆಯಡಿ ಒಳಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈಗಾಗಲೇ ಹಲವು ಬಾರಿ ಪ್ರತಿಭಟನೆ ಮಾಡಿ ಅಂತ್ಯೋದಯ ಕಾರ್ಡ್ಗಳನ್ನು ವಿತರಣೆ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರು ಸಂಬಂಧಪಟ್ಟ ಅಧಿಕಾರಿಗಳು ಅಂತ್ಯೋದಯ ಕಾರ್ಡ್ ಒದಗಿಸಲು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಧರಣಿನಿರತರು ಎಚ್ಚರಿಕೆ ನೀಡಿದರು. ಸಿಪಿಐ(ಎಂ) ಲ.ಜಗನ್ನಾಥ ಧರಣಿಯ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.