ಶನಿವಾರ, ಮೇ 8, 2021
27 °C

ನಗರದ ಯುವತಿ ಸಂಶಯಾಸ್ಪದ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಸಕ್ರೆಬೈಲು ಸಮೀಪದ ತುಂಗಾ ಜಲಾಶಯದ ಹಿನ್ನೀರಿನಲ್ಲಿ ಯುವತಿಯೊಬ್ಬಳು ಸಂಶಯಾಸ್ಪದವಾಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.ಮೃತ ಯುವತಿಯನ್ನು ಬೆಂಗಳೂರಿನ ನೆಲಮಂಗಲ ಸಮೀಪದ ನಿವಾಸಿ ರೂಪಾ (20) ಎಂದು ಗುರುತಿಸಲಾಗಿದೆ. ಈಕೆಯ ಶವ ಬುಧವಾರ ಪತ್ತೆಯಾಗಿದೆ. ರೂಪಾಳ ಪ್ರಿಯತಮ ಮೌನೇಶ್ (26)ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮೌನೇಶ್ ಹಾಗೂ ರೂಪಾ ಬೆಂಗಳೂರಿನ ಗಾರ್ಮೆಂಟ್ಸ್‌ವೊಂದರ ಉದ್ಯೋಗಿಯಾಗಿದ್ದು, ಪರಿಚಯ ಪ್ರೇಮಕ್ಕೆ ತಿರುಗಿದೆ. ವಿವಾಹಕ್ಕೆ ಎರಡೂ ಮನೆಯವರ ವಿರೋಧ ಇತ್ತು ಎನ್ನಲಾಗಿದೆ.  ಈ ಹಿನ್ನೆಲೆಯಲ್ಲಿ ಮಂಗಳವಾರ ಸಕ್ರೆಬೈಲು ಸಮೀಪದ ಬಂದು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದರು ಎನ್ನಲಾಗಿದೆ.ಇಬ್ಬರೂ ನೀರಿನಲ್ಲಿ ತೆಪ್ಪದಲ್ಲಿ ಹೋದಾಗ, ಮೊದಲು ರೂಪಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನದಿಗೆ ಹಾರಲು ಧೈರ್ಯ ಸಾಲದ ಮೌನೇಶ್ ಹಿಂದಕ್ಕೆ ಬಂದು ಮರಕ್ಕೆ ವೇಲ್ ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ, ಅದು ತುಂಡಾಗಿ ಕೆಳಕ್ಕೆ ಬಿದ್ದಿದ್ದಾನೆ ಎಂದು ಹೇಳಲಾಗುತ್ತಿದೆ. ಮೌನೇಶ್ ವರ್ತನೆ ಶಂಕೆಗೆ ಎಡೆಮಾಡಿಕೊಡುತ್ತಿದ್ದು, ರೂಪಾಳ ಸಾವಿನ ಬಗ್ಗೆ ಅನುಮಾನವಿದೆ. ಈ ಕುರಿತು ತನಿಖೆ ನಡೆಸುವಂತೆ ರೂಪಾಳ ಪೋಷಕರು ತುಂಗಾ ನಗರ ಠಾಣೆಗೆ ನೀಡಿದ ದೂರಿನಲ್ಲಿ ಆಗ್ರಹಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.