ಸೋಮವಾರ, ಮೇ 23, 2022
30 °C

ನಗರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ನಗರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಲು ಸದಸ್ಯರಿಂದ ಸಹಿ ಸಂಗ್ರಹ ನಡೆದಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.ಬಾಗಲಕೋಟೆ ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ ಅವರ ವಿರುದ್ಧ ಅವರ ಪಕ್ಷದರೇ ಸುಮಾರು 16ಕ್ಕೂ ಹೆಚ್ಚು ಸದಸ್ಯರು ಅವಿಶ್ವಾಸ ಗೊತ್ತುವಳಿ ಮಂಡಿಸಲು ಸಹಿ ಸಂಗ್ರಹ ಮಾಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ನಗರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವ ಮೂಲಕ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಳ್ಳುವ ಎಲ್ಲ ಲಕ್ಷಣಗಳು ಕಂಡುಬರುತ್ತಿವೆ.ಉಪಾಧ್ಯಕ್ಷ ಶರಣಪ್ಪ ಗುಳೇದ ಸೇರಿದಂತೆ ಈಗಾಗಲೇ 16ಕ್ಕೂ ಹೆಚ್ಚು ಸದಸ್ಯರು ಸಹಿ ಮಾಡಿದ್ದು ಇನ್ನೂ ಹಲವು ಸದಸ್ಯರು ಅಧ್ಯಕ್ಷರ ವಿರುದ್ಧ ಸಹಿ ಮಾಡುವ ಸಾಧ್ಯತೆಗಳು ಇದೆ ಎಂದು ಹೇಳಲಾಗಿದೆ. ತಾ.19ರಂದು ಸ್ಥಳೀಯ ಶಾಸಕ ವೀರಣ್ಣ ಚರಂತಿಮಠ ಅವರಿಗೆ ಸಹಿ ಸಂಗ್ರಹಣೆಯನ್ನು ಸಲ್ಲಿಸಲಿದ್ದಾರೆ.ಇದು ಬಿಜೆಪಿಯ ಆಂತರಿಕ ಬಂಡಾಯಕ್ಕೆ ಮುನ್ನಡೆಯಾಡಿದಂತಾಗಿದೆ ಎಂದು ಅರ್ಥೈಹಿಸಲಾಗಿದೆ.

ಇತ್ತೀಚಿಗೆ ನಗರಸಭೆ ಅಧ್ಯಕ್ಷರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಅಲ್ಲದೇ ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ ಎಂದು ಅವರ ಧೋರಣೆ ಖಂಡಿಸಿ ಸದಸ್ಯರು ಗೊತ್ತುವಳಿ ಮಂಡಿಸಲು ನಿರ್ಧರಿಸಿದ್ದಾರೆ. ಈ ವಿಷಯ ಸ್ಥಳೀಯ ಶಾಸಕರ ಗಮನಕ್ಕು ತರಲಾಗಿದೆ ಎಂದು ಹೇಳಲಾಗಿದೆ.ಬಿಜೆಪಿ ವತಿಯಿಂದ ಮಂಗಳವಾರ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ನಗರಸಭೆಯ ಕೆಲವೇ ಸದಸ್ಯರು ಭಾಗವಹಿಸುವ ಮೂಲಕ ಅಸಮಾದಾನ ಹೊರಹಾಕಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.