ಸೋಮವಾರ, ಜುಲೈ 26, 2021
26 °C

ನಗರಸಭೆ ಅಧ್ಯಕ್ಷ, ಸದಸ್ಯರಿಂದ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ‘ಪ್ಲಾಸ್ಟಿಕ್’ ನಿಷೇಧಿಸಿದರೂ ನಗರದ ವಿವಿಧ ಕಡೆ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಅಂಗಡಿ-ಮುಂಗಟ್ಟುಗಳ ಮೇಲೆ ಸೋಮವಾರ ಸ್ವತಃ ನಗರಸಭೆ ಅಧ್ಯಕ್ಷರು ಸೇರಿದಂತೆ ಸದಸ್ಯರು ಪಕ್ಷಾತೀತವಾಗಿ ದಾಳಿ ನಡೆಸಿದರು.ನಗರದ ಗಾಂಧಿಬಜಾರ್‌ನ ಸುಮಾರು 30ಕ್ಕೂ ಹೆಚ್ಚು ಪ್ಲಾಸ್ಟಿಕ್ ವಿತರಕರು ಮತ್ತು ಟ್ರೇಡರ್ಸ್‌ಗಳ ಅಂಗಡಿಗಳ ಮೇಲೆ ದಾಳಿ ನಡೆಸಿದ ನಗರಸಭೆ ಸದಸ್ಯರು,  ಅಂದಾಜು 100ಕೆಜಿಗಿಂತ ಅಧಿಕ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡರು.ಅಂಗಡಿ ಮಾಲೀಕರ ಆಕ್ಷೇಪ

ಈ ಸಂದರ್ಭದಲ್ಲಿ ಕೆಲವೆಡೆ ಅಂಗಡಿ ಮಾಲೀಕರು ಸದಸ್ಯರೊಂದಿಗೆ ವಾಗ್ವಾದಕ್ಕೆ ಇಳಿದರು.40ಮೈಕ್ರಾನ್‌ಗಿಂತ ಹೆಚ್ಚಿನ ಗುಣಮಟ್ಟದ ಪ್ಲಾಸ್ಟಿಕ್ ಬಳಸಿದರೂ ವಶಪಡಿಸಿಕೊಳ್ಳಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.ದಿನದಿಂದ ದಿನಕ್ಕೆ ನಗರದಲ್ಲಿ ಪ್ಲಾಸ್ಟಿಕ್ ಬಳಕೆ ಮಿತಿಮೀರುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಏ. 16ರಿಂದಲೇ 40ಮೈಕ್ರಾನ್‌ಗಿಂತ ಕಡಿಮೆ ಗುಣಮಟ್ಟದ ಪ್ಲಾಸ್ಟಿಕ್ ಬಳಸಕೂಡದು ಎಂದು ಸೂಚಿಸಲಾಗಿದೆ. ಆದರೂ, ಬಳಕೆ ಮಾಡುತ್ತಿರುವುದು ಕಂಡುಬರುತ್ತಿದೆ.

 

ಆದ್ದರಿಂದ ದಾಳಿ ನಡೆಸಿ, ಎಚ್ಚರಿಕೆ ನೀಡಲಾಯಿತು. ಇದಕ್ಕೂ ಸ್ಪಂದಿಸದಿದ್ದರೆ ದಂಡ ವಿಧಿಸಲಾಗುವುದು. ಆದಾಗ್ಯೂ ಹಠಮಾರಿ ಧೋರಣೆ ಮುಂದುವರಿಸಿದಲ್ಲಿ ಆ ಅಂಗಡಿಗಳ ಪರವಾನಗಿ ರದ್ದುಪಡಿಸಲಾಗುವುದು. ಅಲ್ಲದೇ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುವುದು ಎಂದು ನಗರಸಭೆ ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದರು.ದಾಳಿಯಲ್ಲಿ ಅಧ್ಯಕ್ಷ ಕೆ.ಎಸ್. ಗಂಗಾಧರಪ್ಪ, ಉಪಾಧ್ಯಕ್ಷ ಬಿ. ಸತ್ಯನಾರಾಯಣ, ಸದಸ್ಯರಾದ ಎಸ್.ಕೆ. ಮರಿಯಪ್ಪ, ಎಸ್.ಎನ್. ಚನ್ನಬಸಪ್ಪ, ರೇಣುಕಾ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ


ಸ್ಪರ್ಧಾತ್ಮಕ ಪರೀಕ್ಷೆಗಳ ಕನ್ನಡ ಅಲ್ಪಾವಧಿ ತರಬೇತಿ ಶಿಬಿರವನ್ನು ಸಹ್ಯಾದ್ರಿ ಕಲಾ ಕಾಲೇಜಿನ ಕನ್ನಡ ವಿಭಾಗ ಹಮ್ಮಿಕೊಂಡಿದ್ದು, ಅದರ ಉದ್ಘಾಟನಾ ಕಾರ್ಯಕ್ರಮ ಮೇ 4ರಂದು ಮಧ್ಯಾಹ್ನ 1.30ಕ್ಕೆ ನಡೆಯಲಿದೆ.ನಿವೃತ್ತ ಪ್ರಾಂಶುಪಾಲ ಡಾ.ಆರ್.ಆರ್. ಕುಲಕರ್ಣಿ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆಯಬೇಕು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.