ನಗರಸಭೆ: ಕಂಪ್ಯೂಟರ್ ಖರೀದಿ ಹಗರಣ ಬೆಳಕಿಗೆ

ಸೋಮವಾರ, ಮೇ 20, 2019
31 °C

ನಗರಸಭೆ: ಕಂಪ್ಯೂಟರ್ ಖರೀದಿ ಹಗರಣ ಬೆಳಕಿಗೆ

Published:
Updated:

ತುಮಕೂರು: ನಗರಸಭೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಲಾಗುವ ಕಂಪ್ಯೂಟರ್ ಖರೀದಿಯಲ್ಲಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ.ಶೇ 22.75ರ ಮುಕ್ತ ನಿಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಉಚಿತವಾಗಿ ಕಂಪ್ಯೂಟರ್‌ಗಳನ್ನು ನೀಡಲಾಗುತ್ತಿದೆ.

 

ನಗರಸಭೆಯ ಸಾಮಾನ್ಯ ಸಭೆಯಲ್ಲಿ ಅನುಮೋದನೆ ಪಡೆಯದೆ ಈ ಕಂಪ್ಯೂಟರ್‌ಗಳನ್ನು ಖರೀದಿಸಿರುವುದು ಒಂದು ಕಡೆಯಾದರೆ, ಮತ್ತೊಂದೆಡೆ ಈ ಕಂಪ್ಯೂಟರ್ ಅನ್ನು ಎಂಆರ್‌ಪಿ ದರಕ್ಕಿಂತ ಹೆಚ್ಚಿನ ದರ ನೀಡಿ ಖರೀದಿಸಿದಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.48 ಕಂಪ್ಯೂಟರ್‌ಗಳನ್ನು ಈಗಾಗಲೇ ಕೊಂಡುಕೊಳ್ಳಲಾಗಿದ್ದು, ಬುಧವಾರ ನಡೆಯುವ ಸಾಮಾನ್ಯ ಸಭೆಯಲ್ಲಿ ಈ ಖರೀದಿಗೆ ಘಟನೋತ್ತರ ಮಂಜುರಾತಿ ಪಡೆಯಲು ಸಿದ್ಧತೆ ನಡೆಸಲಾಗಿದೆ ಎಂದು ನಗರಸಭೆ ಮೂಲಗಳು ತಿಳಿಸಿವೆ.2010-11ನೇ ಸಾಲಿನ ಶೇ 22.75ರ ಮುಕ್ತ ನಿಧಿಯಲ್ಲಿ ಈ ಕಂಪ್ಯೂಟರ್‌ಗಳನ್ನು ಟೆಂಡರ್ ಮೂಲಕವೇ ಖರೀದಿಸಲಾಗಿದೆ. ಮೂರು ಸಂಸ್ಥೆಗಳು ಟೆಂಡರ್‌ನಲ್ಲಿ ಭಾಗವಹಿಸಿದ್ದು, ಕಡಿಮೆ ದರ ನಮೂದಿಸಿದ ಸಂಸ್ಥೆಗೆ ಟೆಂಡರ್ ನೀಡಲಾಗಿದೆ. ಆದರೆ ವಾಸ್ತವಾಗಿ ಈ ಕಂಪ್ಯೂಟರ್ ಎಂಆರ್‌ಪಿ ಬೆಲೆಗಿಂತ 8318 ರೂಪಾಯಿ ಹೆಚ್ಚಿಗೆ ತೆತ್ತು ಖರೀದಿಸಲಾಗಿದೆ. ಮಾರುಕಟ್ಟೆಯಲ್ಲಿ ಈ ಕಂಪ್ಯೂಟರ್ ಒಂದರ ಬೆಲೆ ರೂ. 24682 ಇದ್ದರೂ ರೂ. 32990 ರೂಪಾಯಿ ಪಾವತಿಸಲಾಗಿದೆ ಎನ್ನಲಾಗಿದೆ.

  

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry