ಮಡಿಕೇರಿ: ನಗರಸಭಾ ಚುನಾವಣೆ ಹಿನ್ನೆಲೆ ರಾಜಕೀಯ ಪಕ್ಷಗಳು ಅನುಸರಿಸಬೇಕಾದ ಕ್ರಮಗಳ ಕುರಿತು ಚುನಾವಣಾಧಿಕಾರಿಗಳು ನಗರಸಭೆಯ ಸಭಾಂಗಣದಲ್ಲಿ ಶುಕ್ರವಾರ ಮಾಹಿತಿ ನೀಡಿದರು.

ಚುನಾವಣಾಧಿಕಾರಿ ಎಸ್. ಶ್ರೀಧರ್ ಮಾತನಾಡಿ, ನಗರಸಭಾ ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಸಲ್ಲಿಸಬೇಕಾದ ದಾಖಲೆಗಳು, ಪ್ರತಿ ಅಭ್ಯರ್ಥಿಗಳ ಚುನಾವಣಾ ವೆಚ್ಚ, ಸಭೆ ಸಮಾರಂಭಗಳಲ್ಲಿನ ವೆಚ್ಚ, ಬ್ಯಾನರ್, ಬಂಟಿಂಗ್ಸ್, ಪೋಸ್ಟರ್ಸ್ ವೆಚ್ಚಗಳು, ಸಾರಿಗೆ ವೆಚ್ಚ, ಸಾರ್ವಜನಿಕ ಸಭೆ ಸಮಾರಂಭದ ವೆಚ್ಚ ಹೀಗೆ ಚುನಾವಣೆಗೆ ಸಂಬಂಧಿಸಿದ ಪ್ರತಿನಿತ್ಯದ ವೆಚ್ಚಗಳ ಬಗ್ಗೆ ಮಾಹಿತಿಯನ್ನು ಚುನಾವಣಾ ಶಾಖೆಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದರು.

ಚುನಾವಣಾಧಿಕಾರಿ ತಿರುಮಲೇಶ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳ ಜತೆ ಒಬ್ಬ ಸೂಚಕರೊಂದಿಗೆ ಬಂದು ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿಗಳು ಯಾವ ಯಾವ ದಾಖಲೆಗಳನ್ನು ಸಲ್ಲಿಸಬೇಕು ಎಂದು ಅವರು ಮಾಹಿತಿ ನೀಡಿದರು. ಜೆಡಿಎಸ್ ಜಿಲ್ಲಾಧ್ಯಕ್ಷರಾದ ವಿ.ಪಿ. ಶಶಿಧರ್, ನಗರ ಜೆಡಿಎಸ್ ಅಧ್ಯಕ್ಷರಾದ ರಾಜೇಶ್, ಬಿಜೆಪಿ ನಗರ ಅಧ್ಯಕ್ಷರಾದ ಮಹೇಶ್ ಜೈನೀರ, ಪ್ರಧಾನ ಕಾರ್ಯದರ್ಶಿ ನಾಪಂಡ ರವಿಕಾಳಪ್ಪ, ಪ್ರಮುಖರಾದ ಪ್ರಶಾಂತ್, ಉಮೇಶ್ ಸುಬ್ರಹ್ಮಣಿ, ಕೋಡಿ ಚಂದ್ರಶೇಖರ್ ಭಾಗವಹಿಸಿ ನಗರಸಭಾ ಚುನಾವಣೆ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಹಲವು ಮಾಹಿತಿ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.