ಬುಧವಾರ, ಜೂನ್ 23, 2021
24 °C

ನಗರಾಭಿವೃದ್ಧಿಗೆ 1,087 ಕೋಟಿ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರಾಭಿವೃದ್ಧಿ ಯೋಜನೆಗಳಿಗೆ ಕಳೆದ ಬಜೆಟ್‌ನಲ್ಲಿ ರೂ 7,710 ಕೋಟಿ ನೀಡಿದ್ದ ಸರ್ಕಾರ, ಈ ಬಾರಿ ರೂ 8,797 ಕೋಟಿ ಮೀಸಲಿಟ್ಟಿದೆ. ನೀರು ಸರಬರಾಜು ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ.ಮಂಗಳೂರು ನಗರಕ್ಕೆ ನಿರಂತರ ನೀರು ಸರಬರಾಜು ಯೋಜನೆಯನ್ನು ರೂ 146 ಕೋಟಿ ವೆಚ್ಚದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಘೋಷಿಸಲಾಗಿದೆ.ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಗುಲ್ಬರ್ಗ ನಗರಗಳ ಕೆಲವು ಪ್ರದೇಶಗಳಲ್ಲಿ ಮಾತ್ರ ಇರುವ ನಿರಂತರ ನೀರು ಸರಬರಾಜು ವ್ಯವಸ್ಥೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ರೂ 1,700 ಕೋಟಿ ವೆಚ್ಚದಲ್ಲಿ ನಗರದಾದ್ಯಂತ ವಿಸ್ತರಿಸಲಾಗುವುದು.ನೀರು ಸರಬರಾಜು ಮತ್ತು ಒಳಚರಂಡಿ ಯೋಜನೆಗಳನ್ನು ಆದ್ಯತೆಯ ಮೇರೆಗೆ ರೂ 1,591 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಈ ಯೋಜನೆಯನ್ನು ಮೂರು ವರ್ಷಗಳಲ್ಲಿ ಅನುಷ್ಠಾನಕ್ಕೆ ತರಲಾಗುವುದು.

ಈವರೆಗೆ ಬೃಹತ್ ಯೋಜನೆಯನ್ನೇ ಕಾಣದ 74 ಪಟ್ಟಣಗಳಲ್ಲಿ ನೀರು ಸರಬರಾಜು ಮತ್ತು ನೈರ್ಮಲ್ಯ ಯೋಜನೆಗಳಿಗೆ ಹಣಕಾಸು ಸಂಸ್ಥೆಗಳು ಮತ್ತು ಮಾರುಕಟ್ಟೆಯಿಂದ ಸಂಪನ್ಮೂಲ ಕ್ರೋಡೀಕರಿಸುವ ಕಾರ್ಯ ಆರಂಭಿಸಲಾಗುವುದು.ಇದಲ್ಲದೆ...:

* ಮುಂದಿನ ಐದು ವರ್ಷಗಳಲ್ಲಿ ಎಲ್ಲ ನಗರ ಪ್ರದೇಶಗಳಿಗೆ ನೀರು ಸರಬರಾಜು ಮಾಡುವ ಬೃಹತ್ ಯೋಜನೆ ಸಿದ್ಧಪಡಿಸಲಾಗುವುದು.* ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯಾಪ್ತಿಯನ್ನು ಎಲ್ಲ ನಗರ ಪ್ರದೇಶಗಳಿಗೆ ಹಿಗ್ಗಿಸಲಾಗುವುದು.* ಬೀದಿ ವ್ಯಾಪಾರಿಗಳ ಜೀವನೋಪಾಯಕ್ಕೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಮಸೂದೆ ಮಂಡಿಸಲಾಗುವುದು.* ಮೈಸೂರಿನಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಆಟೋ ನಗರ ಸ್ಥಾಪನೆಗೆ ಅನುದಾನ. ಮೈಸೂರಿನ ಸಂಚಾರಿ ಸಣ್ಣ ವ್ಯಾಪಾರಿ ಸಹಕಾರಿ ಸಂಘಕ್ಕೆ ರೂ 2 ಕೋಟಿ ಸಹಾಯಧನ.* ನಗರ ಸ್ಥಳೀಯ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ರೂ 172 ಕೋಟಿಯ ಕಾರ್ಯದಕ್ಷತೆ ಅನುದಾನ ನೀಡಲಾಗುವುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.