ಗುರುವಾರ , ಮೇ 19, 2022
21 °C

ನಗರ ನೀರು ಸರಬರಾಜಿಗೆ ರೂ 1,150 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವಿವಿಧ ಕಾಮಗಾರಿಗಳಿಗಾಗಿ ಈ ಬಜೆಟ್‌ನಲ್ಲಿ 1,150 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ.ಮಂಡಳಿಯು ಒಟ್ಟು ರೂ 3,384 ಕೋಟಿ ಯೋಜನಾ ವೆಚ್ಚದಲ್ಲಿ ಕಾವೇರಿ ನೀರು ಸರಬರಾಜು ಯೋಜನೆ ಹಂತ-4, ಘಟಕ-2 ಅನ್ನು ಅನುಷ್ಠಾನಗೊಳಿಸುತ್ತಿದೆ. ಯೋಜನೆ ಪೂರ್ಣಗೊಂಡ ಮೇಲೆ ಮಾರ್ಚ್ 2012ರ ವೇಳೆಗೆ 500 ಎಂಎಲ್‌ಡಿ (ಪ್ರತಿದಿನ ಒಂದು ಮಿಲಿಯನ್ ಲೀಟರ್) ನೀರು 12 ಲಕ್ಷಕ್ಕೂ ಅಧಿಕ ಜನರಿಗೆ ಲಭ್ಯವಾಗಲಿದೆ. ಈ ಯೋಜನೆಯಡಿ ಹೊಸದಾಗಿ ಸೇರ್ಪಡೆಯಾದ 7 ನಗರಸಭೆಗಳು, 1 ಪುರಸಭೆ ಹಾಗೂ 110 ಗ್ರಾಮಗಳು ಒಳಗೊಳ್ಳಲಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.