ಗುರುವಾರ , ಮೇ 13, 2021
39 °C

ನಟಿ ಜಿಯಾ ಖಾನ್ ಗರ್ಭಪಾತ: ವೈದ್ಯಕೀಯ ವರದಿ ಪಡೆದ ಪೊಲೀಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಐಎಎನ್‌ಎಸ್): ಬಾಲಿವುಡ್ ನಟಿ ಜಿಯಾ ಖಾನ್ ಗರ್ಭಪಾತ ಸಂಬಂಧಿಸಿದ ವೈದ್ಯಕೀಯ ವರದಿಗಳನ್ನು ಪೊಲೀಸರು ಬುಧವಾರ ಆಸ್ಪತ್ರೆಯಿಂದ ಪಡೆದುಕೊಂಡಿದ್ದಾರೆ.`ಜಿಯಾ ಗರ್ಭಪಾತ ಮಾಡಿಸಿಕೊಂಡಿದ್ದ ಆಸ್ಪತ್ರೆಯಿಂದ ವೈದ್ಯಕೀಯ ವರದಿಗಳನ್ನು ಪಡೆದುಕೊಂಡಿರುವುದು ಬಿಟ್ಟರೆ ಯಾವುದೇ ಹೊಸ ಬೆಳವಣಿಗೆ ನಡೆದಿಲ್ಲ' ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಆರು ಪುಟಗಳ ಪತ್ರದಲ್ಲಿ ಗರ್ಭಪಾತ ಮಾಡಿಸಿಕೊಂಡಿದ್ದ ವಿಷಯವನ್ನು ಜಿಯಾ ಖಾನ್ ಉಲ್ಲೇಖಿಸಿದ್ದರು. ಈ ಪತ್ರವನ್ನು ಜಿಯಾ ತಾಯಿ ಪೊಲೀಸರಿಗೆ ನೀಡಿದ್ದರು. ಈ ಪತ್ರದ ಆಧಾರದ ಮೇಲೆ ಪೊಲೀಸರು ಸೂರಜ್‌ನನ್ನು ಬಂಧಿಸಿದ್ದರು. ಜೂನ್ 3ರಂದು ಜಿಯಾ ಆತ್ಮಹತ್ಯೆಗೆ ಶರಣಾಗಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.