ಶನಿವಾರ, ಮೇ 8, 2021
27 °C

ನಟಿ ಪ್ರಿಯಾಂಕಾ ತಂದೆ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಖ್ಯಾತ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರಿಗೆ ಪಿತೃವಿಯೋಗವಾಗಿದೆ.ಡಾ. ಅಶೋಕ್ ಚೋಪ್ರಾ (62) ಹಲವು ದಿನಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಮಂಗಳವಾರ ಕೋಕಿಲಾಬೆನ್ ಧಿರುಭಾಯ್ ಅಂಬಾನಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರು ಭಾರತೀಯ ಸೇನೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.ಈ ವರ್ಷದ ಆರಂಭದಲ್ಲಿ ಕೆನಡಾದ ವ್ಯಾಂಕುವರ್‌ನಲ್ಲಿ ನಡೆದ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಿಯಾಂಕಾ ತಮ್ಮ ತಂದೆ ಜೊತೆ ಪ್ರಶಸ್ತಿ ಸ್ವೀಕರಿಸಿದ್ದರು.ತಂದೆಯ ಅನಾರೋಗ್ಯದ ಕಾರಣ ಪ್ರಿಯಾಂಕಾ ಕೆಲವು ದಿನಗಳಿಂದ ಚಿತ್ರೀಕರಣದಿಂದ ದೂರವಿದ್ದರು ಎಂದು ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.