ಬುಧವಾರ, ನವೆಂಬರ್ 13, 2019
17 °C

ನಟಿ ರಕ್ಷಿತಾ ಬಿಜೆಪಿಗೆ: ಹಬ್ಬಿದ ವದಂತಿ

Published:
Updated:

ಬೆಂಗಳೂರು: ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.ರಕ್ಷಿತಾ ಅವರಿಗೆ ಈಗಾಗಲೇ ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಲು ಬಿಎಸ್‌ಆರ್ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಆದರೆ, ದಿಢೀರ್ ಬೆಳವಣಿಗೆಯಲ್ಲಿ ಚುನಾವಣಾ ಕಣಕ್ಕೆ ಇಳಿಯದಿರಲು ರಕ್ಷಿತಾ ನಿರ್ಧರಿಸಿದ್ದಾರೆ ಎಂದು ಅವರ ಆಪ್ತಮೂಲಗಳು ತಿಳಿಸಿವೆ. ರಕ್ಷಿತಾ ಸ್ಪರ್ಧೆಗೆ ಚಾಮರಾಜನಗರ ಕ್ಷೇತ್ರದ ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಬೇಸರಗೊಂಡು ಚುನಾವಣೆಗೆ ಸ್ಪರ್ಧಿಸದೇ ಇರಲು ಅವರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ಅವರು ಆಪ್ತರೊಂದಿಗೆ ಸಮಾಲೋಚನೆ ನಡೆಸಿದರು ಎಂದು ತಿಳಿದುಬಂದಿದೆ. ಈ ಕುರಿತು ರಕ್ಷಿತಾ ಪ್ರತಿಕ್ರಿಯೆ ಪಡೆಯಲು ನಡೆಸಿದ ಪ್ರಯತ್ನ ವಿಫಲವಾಯಿತು.

ಪ್ರತಿಕ್ರಿಯಿಸಿ (+)