ಬೀದರ್: ಡಾ. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆಯತ್ತ ಚಪ್ಪಲಿ ಎಸೆಯಲಾಗಿದೆ. ಆದರೆ, ನನ್ನನ್ನು ಗುರಿ ಮಾಡಿಕೊಂಡು ಚಪ್ಪಲಿ ಎಸೆಯಲಾಗಿದೆ ಎಂದು ಬಿಂಬಿಸಲಾಗುತ್ತಿದೆ. ಇದರ ಹಿಂದೆ ಷಡ್ಯಂತ್ರ ಇದೆ ಎಂದು ಶಾಸಕ ರಹೀಮ್ಖಾನ್ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅರವಿಂದ ಅರಳಿ ಅವರ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿಯೇ ಹಲ್ಲೆ ನಡೆಸಲಾಗಿದೆ ಎಂದು ಆಪಾದಿಸಿದರು.

ಬೀದರ್ನಲ್ಲಿ ಶಾಂತಿಗೆ ಭಂಗ ಉಂಟು ಮಾಡುವುದಕ್ಕಾಗಿ ಪ್ರತಿ ಕಾಲೋನಿಯಲ್ಲಿ ಜಾತಿಯತೆ, ಗುಂಪುಗಾರಿಕೆ ಉಂಟು ಮಾಡಲಾಗುತ್ತಿದೆ ಎಂದು ಆಪಾದಿಸಿದರು.

ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಿದ್ದಾಗಿ ಕಾರ್ಯಕ್ರಮದಲ್ಲಿ ಬಹಿರಂಗವಾಗಿ ಹೇಳಿಕೊಳ್ಳುತ್ತಿದ್ದಾರೆ. ತಮ್ಮ ಕಾರ್ಯಕರ್ತರಿಗೇ ಕೆಲಸ ಕೊಡುವಂತೆ ಅಧಿಕಾರಿಗಳಿಗೆ ಕಿರುಕುಳ ಕೊಡುತ್ತಿದ್ದಾರೆ ಎಂದು ಆಪಾದಿಸಿದರು.

ರಸ್ತೆ ಅಭಿವೃದ್ಧಿಗಾಗಿ 6 ಕೋಟಿ ರೂಪಾಯಿ ಮಂಜೂರು ಮಾಡಿಸಿದ್ದಾಗಿ ಹೇಳಿಕೆ ನೀಡಿದ್ದಾರೆ. ಯೋಜನೆ ಇಲ್ಲದೇ ಅಷ್ಟು ಹಣ ಮಂಜೂರಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗಾಗಿ 5 ಕೋಟಿ ರೂಪಾಯಿ ಮಂಜೂರು ಮಾಡಿಸಿದ್ದಾಗಿ ಹೇಳಿಕೊಂಡಿದ್ದಾರೆ. ಇದಕ್ಕಾಗಿ ಎಲ್ಲ ಶಾಸಕರು ಒತ್ತಡ ಹಾಕಿದ್ದಾರೆ ಎಂದು ತಿಳಿಸಿದರು.

2008 ರ ವಿಧಾನಸಭೆ ಚುನಾವಣೆ ಪ್ರಾಮಾಣಿಕವಾಗಿ ನಡೆದಿದ್ದರೆ ನಾನೇ ಗೆಲ್ಲುತ್ತಿದೆ. ಚುನಾವಣೆಯಲ್ಲಿ ಗುರುತಿನ ಚೀಟಿ ಖರೀದಿಸದಿದ್ದರೆ ನಾನು ಸೋಲುತಿರಲಿಲ್ಲ ಎಂದು ಹೇಳಿದರು.

ಡಾ. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ತಮ್ಮ ಮೇಲೆ ಹಲ್ಲೆಗೆ ಯತ್ನಿಸಿರುವ ಪ್ರಕರಣಕ್ಕೆ ಬಿಜೆಪಿ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ಕಾರಣರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅರವಿಂದಕುಮಾರ ಅರಳಿ ಆಪಾದಿಸಿದರು.

ಶಿಷ್ಟಾಚಾರದ ಹಿನ್ನೆಲೆಯಲ್ಲಿ ಸೂರ್ಯಕಾಂತ ಅವರನ್ನು ವೇದಿಕೆಯಿಂದ ಕೆಳಗಿಳಿಸಲಾಯಿತು. ಅದನ್ನೇ ಅವಮಾನ ಎಂದು ಭಾವಿಸಿ ಹಲ್ಲೆಗೆ ಪ್ರಚೋಚನೆ ನೀಡಿದ್ದಾರೆ ಎಂದು ಆರೋಪಿಸಿದರು.

ತಾವು ದೂರು ನೀಡಿದರೂ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಿಲ್ಲ. ಸೂರ್ಯಕಾಂತ ಶಾಸಕ ಅಥವಾ ಲೋಕಸಭಾ ಸದಸ್ಯರಲ್ಲ. ಮಾಜಿ ಸಚಿವರ ಪುತ್ರ. ಆದರೆ, ಪೊಲೀಸರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಎಂದು ಆಪಾದಿಸಿದರು.

ದೂರಿನಲ್ಲಿ ಸೂರ್ಯಕಾಂತ ಅವರ ಹೆಸರು ಸೇರಿದ್ದರೂ ಒತ್ತಡಕ್ಕೆ ಮಣಿದು ಅವರ ಹೆಸರು ಕೈಬಿಟ್ಟಿದ್ದಾರೆ ಎಂದು ಆಪಾದಿಸಿದರು. ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ದೂರು ಕೊಟ್ಟಿದ್ದನ್ನೇ ಎಫ್ಐಆರ್ನಲ್ಲಿ ಸೇರಿಸಬೇಕು. ಆದರೆ, ಸೂರ್ಯಕಾಂತ ಅವರ ಹೆಸರು ಕೈಬಿಟ್ಟಿರುವುದು ಕಾನೂನು ಬಾಹೀರ ಎಂದು ವಿಧಾನ ಪರಿಷತ್ ಸದಸ್ಯ ಕಾಜಿ ಅರ್ಷದ್ ಅಲಿ ಆಪಾದಿಸಿದರು. ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಆನಂದ ದೇವಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.