ಗುರುವಾರ , ಮೇ 6, 2021
33 °C

ನನ್ನ ಅವಧಿಯಲ್ಲಿ ಅಕ್ರಮ ನಡೆದಿಲ್ಲ: ಜಸ್ವಂತ್ ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): 2ಜಿ ತರಂಗಾಂತರ  ಹಗರಣದಲ್ಲಿ ತಮ್ಮನ್ನು ಸಿಬಿಐ ವಿಚಾರಣೆಗೊಳಪಡಿಸಲು ನಿರ್ಧರಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್, ತಮ್ಮ ಅವಧಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ.ಜಸ್ವಂತ್ ಸಿಂಗ್ ಎನ್‌ಡಿಎ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದರು.`ನನ್ನ ಅವಧಿಯಲ್ಲಿ ಅಕ್ರಮ ನಡೆದಿಲ್ಲ. ಯಾರಾದರೂ ಉದ್ದೇಶಪೂರ್ವಕವಾಗಿ ಈ ಆರೋಪ ಮಾಡಿದರೆ ನನಗೆ ನೋವಾಗುತ್ತದೆ~ ಎಂದಿರುವ ಜಸ್ವಂತ್, `ವಿಚಾರಣೆಗೊಳಪಡಿಸುವ ಸಂಬಂಧ ನನಗೆ ಸಿಬಿಐನಿಂದ ಅಥವಾ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ. ಆದರೆ ಅದು ತನ್ನ ಕರ್ತವ್ಯ ಮಾಡುತ್ತಿರುವುದು ಸಂತೋಷದ ವಿಷಯ~ ಎಂದು ಸಂಸತ್ ಭವನದ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.

 

`ಹಗರಣದ ತನಿಖೆಯ ಭಾಗವಾಗಿ ಜಸ್ವಂತ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ~ ಎಂದು ಸಿಬಿಐ ಗುರುವಾರ ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು. ದಯಾನಿಧಿ ಮಾರನ್ ಹಾಗೂ ಪಿ.ಚಿದಂಬರಂ ಅವರನ್ನು ಪ್ರಶ್ನಿಸದೇ ಸಿಬಿಐ ತಾರತಮ್ಯ ಮಾಡುತ್ತಿದೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ `ಪ್ರಭಾವಿ ವ್ಯಕ್ತಿಗಳನ್ನು ತಪ್ಪಿತಸ್ಥರೆಂದು ಹೇಳಲಾಗದು~ ಎನ್ನುವ `ರಾಮಚರಿತ ಮಾನಸ~ ಗ್ರಂಥದ ಸಾಲುಗಳನ್ನು ಅವರು ಉದಾಹರಿಸಿದರು.`2ಜಿ ಹಗರಣವು ಎನ್‌ಡಿಎ ಆಳ್ವಿಕೆಯಲ್ಲಿ ದಿ. ಪ್ರಮೋದ್ ಮಹಾಜನ್ ಹಾಗೂ ಅರುಣ್ ಶೌರಿ ಅವರು ದೂರಸಂಪರ್ಕ ಸಚಿವರಾಗಿದ್ದಾಗ ನಡೆದ ನೀತಿ ಉಲ್ಲಂಘನೆಗೆ ಸಾಕ್ಷಿಯಾಗಿದೆ. ಹಗರಣದ ತನಿಖೆಯ ಭಾಗವಾಗಿ ಆಗಿನ ಹಣಕಾಸು ಸಚಿವ ಜಸ್ವಂತ್ ಸಿಂಗ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ~ ಎಂದು ಸಿಬಿಐ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.