ಬೆಂಗಳೂರು: `ನನ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂಬುದಕ್ಕೆ ಶುಕ್ರವಾರ ನಡೆದ ಮುತ್ತುಲಕ್ಷ್ಮೀ ಅವರ ಪತ್ರಿಕಾಗೋಷ್ಠಿಯೇ ನಿದರ್ಶನ~ ಎಂದು ಶಂಕರ್ ಬಿದರಿ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವೀರಪ್ಪನ್ ಪತ್ನಿ ಮುತ್ತುಲಕ್ಷ್ಮೀ ಅವರು ಮಾಡಿದ ಆರೋಪಕ್ಕೆ ಪ್ರತಿಕ್ರಿಯಿಸಿರುವ ಶಂಕರ್ ಬಿದರಿ ಅವರು, `ವೀರಪ್ಪನ್ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಮುತ್ತುಲಕ್ಷ್ಮೀ ಅವರು ಹಲವು ವರ್ಷಗಳಿಂದ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅವರು ಈ ಹಿಂದೆ ಎಂದೂ ನನ್ನ ವಿರುದ್ಧ ಆರೋಪ ಮಾಡಿರಲಿಲ್ಲ. ಆದರೆ, ಡಿಜಿ ಹುದ್ದೆಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಹೊರಬಿದ್ದ ನಂತರ ಮುತ್ತುಲಕ್ಷ್ಮೀ ಅವರನ್ನು ಕರೆದುಕೊಂಡು ಬಂದು ಪತ್ರಿಕಾಗೋಷ್ಠಿ ನಡೆಸಲಾಗುತ್ತಿದ್ದು, ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ನನಗೆ ಗೊತ್ತಿದೆ~ ಎಂದರು.

`ಕಳೆದ ಐದೂವರೆ ತಿಂಗಳಿನಿಂದ ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಮುತ್ತುಲಕ್ಷ್ಮೀ ಅವರನ್ನು ಕರೆದುಕೊಂಡು ಬಂದು ನನ್ನ ವಿರುದ್ಧ ಪತ್ರಿಕಾಗೋಷ್ಠಿ ನಡೆಸುತ್ತಾರೆ ಎಂದು ಐದು ದಿನಗಳ ಹಿಂದೆಯೇ ನನಗೆ ಗೊತ್ತಿತ್ತು. ಮುತ್ತುಲಕ್ಷ್ಮೀ ನನ್ನ ವಿರುದ್ಧ ಮಾಡಿರುವ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದವು~ ಎಂದು ಶಂಕರ್ ಬಿದರಿ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.