ಭಾನುವಾರ, ಆಗಸ್ಟ್ 1, 2021
26 °C

ನಮ್ಮದೇನೂ ಅಭ್ಯಂತರವಿಲ್ಲ:ಶೆಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಮೂಲಕ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ 32,500 ರೂಪಾಯಿ ಶುಲ್ಕ ನಿಗದಿಪಡಿಸಿರುವ ಸರ್ಕಾರದ ನಿರ್ಧಾರದ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ರಾಜ್ಯ ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸಂಘದ (ಕುಪೆಕಾ) ಉಪಾಧ್ಯಕ್ಷ ಡಾ. ಎಂ.ಕೆ.ಪಾಂಡುರಂಗ ಶೆಟ್ಟಿ ಅವರು, ‘ಸರ್ಕಾರದ ಜೊತೆ ಸರ್ವಸಮ್ಮತ ಒಪ್ಪಂದ ಮಾಡಿಕೊಳ್ಳಲು ಕೆಲವು ಕಾಲೇಜುಗಳು ಸಿದ್ಧವಾಗಿದ್ದರೆ ನಮ್ಮದೇನೂ ಅಭ್ಯಂತರವಿಲ್ಲ’ ಎಂದು ಹೇಳಿದ್ದಾರೆ.

‘ಶುಲ್ಕ ನಿಗದಿ ಸಂಬಂಧ ನ್ಯಾ. ಪದ್ಮರಾಜ ಸಮಿತಿಯ ವರದಿಯ ಅನುಸಾರವೇ ಶುಲ್ಕ ನಿಗದಿ ಮಾಡಬೇಕು ಎಂದು ಕೋರಿ ವಿಷಯ ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿದೆ. ನ್ಯಾ. ಪದ್ಮರಾಜ ಸಮಿತಿಯ ವರದಿ ಪ್ರಕಾರವೇ ಶುಲ್ಕ ನಿಗದಿ ಮಾಡಬೇಕು ಎಂದು ಹೇಳುವವರು ನ್ಯಾಯಾಲಯದ ತೀರ್ಪಿಗೆ ಕಾಯುತ್ತಾರೆ. ಸರ್ಕಾರದ ತೀರ್ಮಾನವನ್ನು ಒಪ್ಪುವ ಕಾಲೇಜು ಆಡಳಿತ ಮಂಡಳಿಗಳು ಸರ್ವಸಮ್ಮತ ಒಪ್ಪಂದಕ್ಕೆ ಸಹಿ ಮಾಡುತ್ತಾರೆ’ ಎಂದು ಹೇಳಿದರು.

ಬುಧವಾರ ‘ಕುಪೆಕಾ’ ಸದಸ್ಯರ ಸಭೆ ನಡೆಯಲಿದೆ. ಅಲ್ಲಿ ಈ ವಿಚಾರ ಚರ್ಚಿಸಲಾಗುವುದು. ಕುಪೆಕಾ ಹೈಕೋರ್ಟ್ ತೀರ್ಪಿಗೆ ಕಾಯಲಿದೆ ಎಂದು ಅವರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.