ಮಂಗಳವಾರ, ಮೇ 11, 2021
24 °C

`ನಮ್ಮಮೆಟ್ರೊ' ಪಥ ಬದಲು: ಅಹವಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಜಯದೇವ ಆಸ್ಪತ್ರೆ ಬಳಿ `ನಮ್ಮ ಮೆಟ್ರೊ' ಪಥ ಬದಲಾವಣೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಸ್ಥಳೀ ಯರು ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಿದರು.ಜಯದೇವ ಇಂಟರ್‌ಚೇಂಜ್ ಮೆಟ್ರೊ ವಿಕ್ಟಿಮ್ಸ ಫೋರಂ ಸಂಚಾಲಕ ಕೆ. ರಮೇಶ್ ನೇತೃತ್ವದಲ್ಲಿ ಸುಮಾರು 20ಕ್ಕೂ ಅಧಿಕ ನಿವಾಸಿಗಳು ಸಚಿವರನ್ನು ಭೇಟಿ ಮಾಡಿದರು. `ಪಥ ಬದಲಾವಣೆಯ ನಿರ್ಧಾರದಿಂದ ಸ್ಥಳೀಯರಿಗೆ ಆಗಿರುವ ಸಮಸ್ಯೆಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು. ಸಚಿವರಿಗೂ ಸಮಸ್ಯೆಯ ಆಳ ಅರಿವಾಗಿದೆ. ಇದೇ 15ರಂದು ಮೆಟ್ರೊ ಅಧಿಕಾರಿಗಳ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ಸಂತ್ರಸ್ತರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವುದಾಗಿ ಸಚಿವರು ಅಭಯ ನೀಡಿದ್ದಾರೆ' ಎಂದು ಕೆ.ರಮೇಶ್ `ಪ್ರಜಾವಾಣಿ'ಗೆ ತಿಳಿಸಿದರು.ಕೋರ್ಟ್ ಮೊರೆ ಹೋಗಲು ಸಿದ್ಧತೆ: 

`ಇದೇ 15ರಂದು ನಡೆಯಲಿರುವ ಸಭೆಯಲ್ಲಿ ಸಂತ್ರಸ್ತರ ಪರವಾಗಿ ನಿರ್ಧಾರ ಹೊರಹೊಮ್ಮಬಹುದು ಎಂಬ ನಿರೀಕ್ಷೆಯಲ್ಲಿ ಇದ್ದೇವೆ. ಎರಡು ಬಾರಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಲಾಗಿದೆ.

ರಾಜ್ಯಪಾಲರಿಗೂ ಮನವಿ ಸಲ್ಲಿಸಲಾಗುವುದು. 15ರ ವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ' ಎಂದು ಅವರು ತಿಳಿಸಿದರು.

`ಸಂತ್ರಸ್ತರ ವಿರುದ್ಧವಾಗಿ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡರೆ ಕೋರ್ಟ್ ಮೊರೆ ಹೋಗಲಾಗುವುದು. ಅದಕ್ಕೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ' ಎಂದು ಮಾಹಿತಿ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.