ಬುಧವಾರ, ಜೂನ್ 23, 2021
30 °C

ನಮ್ಮ ಆಟ ಶುರು ಮಾಡ್ತೀವಿ: ಜಾರಕಿಹೊಳಿ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: `ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರಿಗೆ ಬಜೆಟ್ ಮಂಡಿಸಲು ಅವಕಾಶ ನೀಡದಿದ್ದರೆ ನಾನು ಸೇರಿದಂತೆ 20 ಜನ ಸಮಾನ ಮನಸ್ಕ ಶಾಸಕರು ರಾಜೀನಾಮೆ ನೀಡುತ್ತೇವೆ~ ಎಂದು ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.`ಸದ್ಯದ ರಾಜಕೀಯ ಬೆಳವಣಿಗೆಗಳಿಂದ ಬೇಸರವಾಗಿದೆ. ಸರ್ಕಾರ ಮತ್ತು ಪಕ್ಷದ ವರ್ಚಸ್ಸಿಗೆ ಹಾನಿಯಾಗಿದೆ. ಈ ಗೊಂದಲಕ್ಕೆ ತೆರೆ ಎಳೆಯಬೇಕು. ಇಲ್ಲವಾದರೆ ಬಜೆಟ್ ಅಧಿವೇಶನ ನಂತರ ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆಗೆ ಹೋಗುವುದು ಒಳ್ಳೆಯದು~ ಎಂದರು. `ನಾವು ಯಡಿಯೂರಪ್ಪ ವಿರೋಧಿಗಳಲ್ಲ, ಆದರೆ ಅವರ ಕಿರುಕುಳದಿಂದ ಬೇಸರವಾಗಿದೆ. ಯಡಿಯೂರಪ್ಪ ಬಣ ಬಜೆಟ್ ಮಂಡನೆಗೆ ಅಡ್ಡಿಯನ್ನುಂಟು ಮಾಡಿದರೆ, ನಾವು ನಮ್ಮ ಆಟವನ್ನು ಶುರು ಮಾಡಬೇಕಾಗುತ್ತದೆ~ ಎಂದು ಹೇಳಿದರು.ಸದಾನಂದಗೌಡ ಉತ್ತಮ ಆಡಳಿತ ನೀಡುತ್ತಿದ್ದಾರೆ. ಅವರಿಗೆ ಸಹಕಾರ ನೀಡಬೇಕು. ಇಲ್ಲದಿದ್ದರೆ ಹೆಸರು ಕೆಡಿಸಿಕೊಳ್ಳುವ ಬದಲು ವಿಧಾನಸಭೆ ವಿಸರ್ಜಿಸಿ, ಚುನಾವಣೆಗೆ ಹೋಗುವುದು ಉತ್ತಮ ಎಂದು `ಪ್ರಜಾವಾಣಿ~ಗೆ ತಿಳಿಸಿದರು.`ಸದಾನಂದ ಗೌಡ ಅಧಿಕಾರ ವಹಿಸಿಕೊಂಡ ನಂತರ ಪಕ್ಷದಲ್ಲಿ ನಡೆದಿರುವ ಬೆಳವಣಿಗೆಗಳು ಪಕ್ಷದ ಶಾಸಕರು, ಮುಖಂಡರು ಹಾಗೂ ಜನರಿಗೆ ಬೇಸರ ತರಿಸಿವೆ. ಆದರೆ ಇದನ್ನು ಹೇಳಲು ಶಾಸಕರು ಹೆದರುತ್ತಿದ್ದಾರೆ. ನನಗೆ ಯಾವುದೇ ಹೆದರಿಕೆ ಇಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಮುಂದಿನ ದಿನಗಳಲ್ಲಿ ನನ್ನ ಹೇಳಿಕೆಗೆ ಧ್ವನಿಗೂಡಿಸುವವರ ಸಂಖ್ಯೆ ಹೆಚ್ಚಾಗಲಿದೆ~ ಎಂದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.