ಗುರುವಾರ , ಜನವರಿ 23, 2020
19 °C
ಕಾರ್ಮಿಕರ ದುಃಸ್ಥಿತಿ ದೂರಿನ ವಿಚಾರಣೆ

ನಮ್ಮ ಮೆಟ್ರೊ ಕಾಮಗಾರಿ: 13 ಗುತ್ತಿಗೆದಾರರಿಗೆ ನೋಟಿಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಮ್ಮ ಮೆಟ್ರೊ’ ಯೋಜನೆಯಡಿ ವಿವಿಧ ಕಾಮಗಾರಿ ಕೈಗೊಂಡಿರುವ 13 ಗುತ್ತಿಗೆದಾರರಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಬುಧವಾರ ಆದೇಶಿಸಿದೆ.‘ನಮ್ಮ ಮೆಟ್ರೊ’ ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಸ್ಥಿತಿ ಉತ್ತಮವಾಗಿಲ್ಲ ಎಂದು ದೂರಿ ಸ್ಯಾಮ್ಯುವೆಲ್‌ ಸತ್ಯಶೀಲನ್‌ ಎಂಬುವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್‌. ವಘೇಲಾ ಮತ್ತು ನ್ಯಾಯಮೂರ್ತಿ ಎಸ್‌.ಎನ್‌. ಸತ್ಯನಾರಾಯಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈಆದೇಶ ನೀಡಿತು.‘ಕಾರ್ಮಿಕರ ಕಲ್ಯಾಣಕ್ಕೆ ಆದ್ಯತೆ ನೀಡದ ಗುತ್ತಿಗೆದಾರರ ಹೆಸರನ್ನು ನಮಗೆ ತಿಳಿಸಿ. ಅವರಿಗೆ ನೋಟಿಸ್‌ ಜಾರಿ ಮಾಡಿ, ನಾವೇ ಅವರಿಗೆ ಎಚ್ಚರಿಕೆ ನೀಡುತ್ತೇವೆ’ ಎಂದು ಪೀಠ ಹಿಂದಿನ ಬಾರಿ ವಿಚಾರಣೆಯ ವೇಳೆ ಮೌಖಿಕವಾಗಿ ಹೇಳಿತ್ತು.ಅರ್ಜಿಯ ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಪ್ರತಿಕ್ರಿಯಿಸಿ (+)