ಶುಕ್ರವಾರ, ಮೇ 7, 2021
26 °C

ನಮ್ಮ ಶಾಲೆಗೆ ಬನ್ನಿ... ಕರಪತ್ರ ಮುದ್ರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಮಕ್ಕಳನ್ನು ಶಾಲೆಯತ್ತ ಆಕರ್ಷಿಸಲು ತಾಲ್ಲೂಕಿನ ಶಿರವಾಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿಶೇಷ ಸವಲತ್ತುಗಳನ್ನು ಹೊಂದಿರುವ ಕರಪತ್ರವನ್ನು ಮುದ್ರಿಸಿದೆ.ನಮ್ಮ ಶಾಲೆಗೆ ಪ್ರವೇಶ ಪಡೆಯಲು ಯಾವುದೇ ರೀತಿಯ ಹಣ ಪಡೆಯುವುದಿಲ್ಲ. ಶಾಲೆಯಲ್ಲಿ ಹೈಟೆಕ್ ಶೌಚಾಲಯ, ಬಿಸಿಯೂಟದ ವ್ಯವಸ್ಥೆ ಇದೆ ಎಂದು ಶಾಲಾಭಿವೃದ್ಧಿ ಮಂಡಳಿ ಮತ್ತು ಮುಖ್ಯಶಿಕ್ಷಕರ ಹೆಸರಿನಲ್ಲಿ ಪ್ರಕಟಿಸಲಾಗಿರುವ ಕರಪತ್ರದಲ್ಲಿ ತಿಳಿಸಲಾಗಿದೆ.ಪಠ್ಯಪುಸ್ತಕ, ಎರಡು ಜೊತೆ ಸಮವಸ್ತ್ರವನ್ನು ಉಚಿತವಾಗಿ ನೀಡಲಾಗುವುದು, ಎಸ್‌ಸಿಎಸ್‌ಟಿ ವಿದ್ಯಾರ್ಥಿಗಳಿಗೆ ಸ್ಕೂಲ್‌ಬ್ಯಾಗ್, ನೋಟ್‌ಬುಕ್ ನೀಡಲಾಗುವುದು ಹಾಗೂ ವಿದ್ಯಾರ್ಥಿ ವೇತನದ ಸೌಲಭ್ಯವೂ ಇದೆ ಎಂದು ಕರಪತ್ರದಲ್ಲಿ ಬರೆಯಲಾಗಿದೆ.ಶಾಲೆಯಲ್ಲಿ ನುರಿತ ಅನುಭವಿ ಶಿಕ್ಷಕರು ತರಗತಿಗೊಬ್ಬರಂತೆ ಇದ್ದು ನಮ್ಮ ಮಕ್ಕಳಿಗೆ ಗುಣಮಟ್ಟದ ಉತ್ತಮ ಶಿಕ್ಷಣ ನೀಡಲಾಗುವುದು, ಮಕ್ಕಳ ಸೃಜನಶೀಲತೆ ಹೆಚ್ಚಿಸಲು ವಿವಿಧ ಸ್ಪರ್ಧೆಗಳನ್ನು ಶಾಲೆಯಲ್ಲಿ ಆಯೋಜಿಸಲಾಗುತ್ತದೆ. ಮಕ್ಕಳಿಗೆ ಶೈಕ್ಷಣಿ ಪ್ರವಾಸ ಹಾಗೂ ಹೊರಸಂಚಾರ ಕಾರ್ಯಕ್ರಮವನ್ನು ಪ್ರತಿವರ್ಷ ಏರ್ಪಡಿಸಲಾಗುತ್ತದೆ ಎನ್ನುವ ಅಂಶಗಳನ್ನು ಕರಪತ್ರದಲ್ಲಿ ಉಲ್ಲೇಖಿಸಲಾಗಿದೆ.ಮಕ್ಕಳಿಗಾಗಿ ಎಲ್ಲ ತರಗತಿಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಕಂಪ್ಯೂಟರ್ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಬೋಧನೆ ಮತ್ತು ಮೌಲ್ಯಮಾಪನದಲ್ಲಿ ನವೀನ ವ್ಯವಸ್ಥೆಯನ್ನು ಬಡಲಾಗುತ್ತಿದೆ. ಪ್ರತಿ ವರ್ಷ ಪ್ರತಿಭಾ ಕಾರಂಜಿಯನ್ನು ನಡೆಸಲಾಗುತ್ತಿದೆ. ಶಾಲಾ ಶೈಕ್ಷಣಿಕ ಯೋಜನೆಯಂತೆ ಎಲ್ಲ ರಾಷ್ಟ್ರೀಯ ದಿನಾಚರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಸೃಜನಶೀಲತೆ ಹಾಗೂ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಲಾಗುವುದು ಎನ್ನುವುದನ್ನೂ ಕರಪತ್ರದಲ್ಲಿ ಮುದ್ರಿಸಲಾಗಿದೆ.`ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚಿನ ಮಕ್ಕಳ ದಾಖಲಾತಿ ಆಗಿದೆ. ದಾಖಲಾತಿ ಇನ್ನೂ ಹೆಚ್ಚುವ ಸಾಧ್ಯತೆ ಇದೆ' ಎನ್ನುತ್ತಾರೆ ಶಾಲೆಯ ಶಿಕ್ಷಕರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.