ಶನಿವಾರ, ಮೇ 15, 2021
24 °C

ನರಬಲಿ ಆರೋಪ ಪ್ರಕರಣ:ಕೊಲೆಗೆ ಅಕ್ರಮ ಸಂಬಂಧ ಕಾರಣ - ಪೊಲೀಸ್ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ತಿರುಮಲದೇವರಕೊಪ್ಪದಲ್ಲಿ ನವೆಂಬರ್‌ನಲ್ಲಿ ನಡೆದ ದಲಿತ ಯುವಕ ಬಸವರಾಜ ಕಡೇಮನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.ಆರೋಪಿಗಳಾದ ನಿಂಗನಗೌಡ ಹಾಗೂ ಹುಚ್ಚಪ್ಪ ಎಂಬುವವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ದೋಷಾರೋಪ ಪಟ್ಟಿಯಲ್ಲಿ ಅಕ್ರಮ ಸಂಬಂಧ ಕೊಲೆಗೆ ಕಾರಣ ಎಂದು ತಿಳಿಸಲಾಗಿದೆ.ಆದರೆ, ಇದರಿಂದ ಬೇಸರಗೊಂಡಿರುವ ಯುವಕನ ತಂದೆ ಭರಮಪ್ಪ, ತಾಯಿ ಮಂಜವ್ವ ಕಡೇಮನಿ ಹಾಗೂ ವಿವಿಧ ಸಂಘಟನೆಗಳು ಮುಖಂಡರು ಈ ಪ್ರಕರಣದಲ್ಲಿ ನ್ಯಾಯ ದೊರಕಿಸಿಕೊಡಬೇಕೆಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎಚ್.ಕಪಾಡಿಯಾ ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಕ್ರಂಜಿತ್ ಸೇನ್ ಅವರಿಗೆ ಪತ್ರ ಬರೆದಿದ್ದಾರೆ.ತಿರುಮಲದೇವರಕೊಪ್ಪದ ಬಸನಗೌಡ ನಿಂಗನಗೌಡ ಗೌಡರ ನಿರ್ಮಿಸಿದ ನೂತನ ಮನೆಯ ವಾಸ್ತು ದೋಷ ನಿವಾರಣೆಗೆ ಬಸವರಾಜನನ್ನು ಬಲಿ ಕೊಡಲಾಗಿದೆ ಎಂದು ಆರೋಪಿಸಿ, ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.