ಭಾನುವಾರ, ಜೂನ್ 13, 2021
21 °C

ನರಸಿಂಹರಾಜಪುರ: ಸಮಾಜಕಾರ್ಯ ಕಾರ್ಯಾಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನರಸಿಂಹರಾಜಪುರ: ವಿದ್ಯಾರ್ಥಿಗಳಲ್ಲಿ ಬೌದ್ಧಿಕ ಗುಣಮಟ್ಟ ಹೆಚ್ಚಿಸಲು ಕಾರ್ಯಾಗಾರಗಳು ಸಹಾಯವಾಗುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ    ಕಾರ್ಯವಿಭಾಗದ ಮುಖ್ಯಸ್ಥ ಡಾ.ಕೆ. ಉಮೇಶ್ ತಿಳಿಸಿದರು.ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜಕಾರ್ಯ ಹಾಗೂ ಸಮಾಜ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸೋಮವಾರದಿಂದ ಪ್ರಾರಂಭವಾದ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ ಕಾಲೇಜು ಮಟ್ಟದ  ಎರಡು ದಿನಗಳ ಕಾರ್ಯಾಗಾರ ಉದ್ಘಾಟನಾ ಸಮಾರಂಭದಲ್ಲಿ  ಅವರು ಮಾತನಾಡಿದರು. ಸಮಾಜಕಾರ್ಯ ವಿದ್ಯಾರ್ಥಿಗಳು ಸಮಾಜ ಮುಖಿ ಚಿಂತನೆ ಬೆಳೆಸಿಕೊಳ್ಳಲು ಕೌಶಲ್ಯ ಅವಶ್ಯಕವಾಗಿದೆ.  ಉತ್ತಮ ಬದುಕು ರೂಪಿಸಿಕೊಳ್ಳಲು ತರಬೇತಿ ಅವಶ್ಯಕ. ಸಮಾಜದಲ್ಲಿರುವ ಸಮಸ್ಯೆಗಳನ್ನು ಸಾಕಷ್ಟು ಕಡಿಮೆ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ನಿರ್ಣಯಗಳ ಬಗ್ಗೆ ಸರಿಯಾದ ತೀರ್ಮಾನ ತೆಗೆದುಕೊಳ್ಳಲು ಕಾರ್ಯಾಗಾರದಲ್ಲಿ ನಡೆಯುವ ವಿಷಯ ಮಂಡನೆ, ಸಂವಾದಗಳು ದಾರಿ ದೀಪವಾಗುತ್ತವೆ ಎಂದರು.ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಪಿ.ಸಂಪತ್ ಕುಮಾರ್, ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಲು ಗುರಿ ಇರಬೇಕು. ನಿಶ್ಚಯಿಸಿದ ಗುರಿ ತಲುಪಲು ನಿರಂತರ ಪರಿಶ್ರಮ ಅಗತ್ಯವಾಗಿದೆ. ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳ ಬೇಕೆಂದರು.ಅಧ್ಯಕ್ಷತೆ ವಹಿಸಿದ್ದ  ಪ್ರಾಂಶುಪಾಲ ಕೆ.ಮದನಗಿರಿಯಪ್ಪ  ಮಾತನಾಡಿ, ಸಮಾಜಕಾರ್ಯ ವಿಭಾಗದಿಂದ ಆರೋಗ್ಯದ ಅರಿವು, ವ್ಯಕ್ತಿತ್ವ ವಿಕಸ ಮುಂತಾದ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.ಉಪನ್ಯಾಸಕ ಸುದರ್ಶನ್, ಮಾಲಿನಿ, ಅರುಣ್,ಸೀಮಾ, ಸುದೀಶ್, ಕೆ.ಕೀರ್ತಿನಿ ಇದ್ದರು. ಅಜ್ಜಂಪುರ, ಶಿಕಾರಿಪುರ, ಸಾಗರ ಕಾಲೇಜಿನ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.