ಬುಧವಾರ, ನವೆಂಬರ್ 20, 2019
20 °C

ನರೇಂದ್ರಬಾಬುಗೆ ಪ್ರತಿಭಟನೆ ಬಿಸಿ

Published:
Updated:

ಬೆಂಗಳೂರು: ಹಾಲಿ ಶಾಸಕ ಹಾಗೂ ಪಕ್ಷದ ಅಭ್ಯರ್ಥಿಯಾಗಿರುವ ನೆ.ಲ. ನರೇಂದ್ರಬಾಬು ಅವರು ತಮ್ಮನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಂದಿನಿ ಬಡಾವಣೆ ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು ಭಾನುವಾರ ಪ್ರತಿಭಟನೆ ನಡೆಸಿದರು.ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ನಾರಾಯಣ್, ವಾರ್ಡ್ ಸಮಿತಿ ಅಧ್ಯಕ್ಷ ಬೋರೇಗೌಡ, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯೆ ಯಶೋದಾ ಮತ್ತಿತರರು ಸರಸ್ವತಿಪುರದಲ್ಲಿರುವ ನಂದಿನಿ ಬಡಾವಣೆ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿ ಎದುರು ನಡೆದ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.ಪೂರ್ವಗ್ರಹವೇ ಕಾರಣ: ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿದ ನರೇಂದ್ರಬಾಬು, `ಕೆಲವರು ಪೂರ್ವಗ್ರಹಪೀಡಿತರಾಗಿ ನನ್ನ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಸಮಸ್ಯೆಗಳು ಇದ್ದರೆ ನೇರವಾಗಿ ನನ್ನ ಗಮನಕ್ಕೆ ತರಬಹುದಿತ್ತು' ಎಂದರು.

ಪ್ರತಿಕ್ರಿಯಿಸಿ (+)