ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

7

ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

Published:
Updated:
ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

ಅಹಮದಾಬಾದ್ (ಐಎಎನ್‌ಎಸ್): ಗುಜರಾತ್ ನಲ್ಲಿ ಬಿಜೆಪಿಯನ್ನು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿರುವ ನರೇಂದ್ರ ಮೋದಿ ಅವರು ನಾಲ್ಕನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಬುಧವಾರ ಇಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 

ಸರ್ದಾರ್ ಪಟೇಲ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಕಮಲಾ ಬೇನಿವಾಲ್ ಅವರು ನರೇಂದ್ರ ಮೋದಿ ಅವರಿಗೆ ಅಧಿಕಾರ ಗೌಪ್ಯತೆಯನ್ನು ಬೋಧಿಸಿದರು. 

ಬಿಜೆಪಿ ಹಿರಿಯ ಮುಖಂಡರಾದ ಎಲ್. ಕೆ. ಅಡ್ವಾಣಿ, ವೆಂಕಯ್ಯ ನಾಯ್ಡು, ರಾಜನಾಥ ಸಿಂಗ್, ನಿತಿನ್ ಗಡ್ಕರಿ, ಸುಷ್ಮಾ ಸ್ವರಾಜ್ , ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್, ಹಾಗು ಶಿವ ಸೇನಾ ಮುಖ್ಯಸ್ಥ  ಉದ್ಧವ್ ಠಾಕ್ರೆ ಮತ್ತು ಎಂಎನ್ಎಸ್ ಮುಖ್ಯಸ್ಥ  ರಾಜ್ ಠಾಕ್ರೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. 

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry