ಮಂಗಳವಾರ, ಮೇ 18, 2021
31 °C

ನಳಿನಿ, ಮುರುಗನ್ ಕಾರಾಗೃಹದಲ್ಲಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ (ಐಎಎನ್‌ಎಸ್): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ನಳಿನಿ ಶನಿವಾರ ವೆಲ್ಲೂರು ಕೇಂದ್ರ ಕಾರಾಗೃಹದಲ್ಲಿರುವ ತನ್ನ ಪತಿ, ಇದೇ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಮುರುಗನ್‌ನನ್ನು ಭೇಟಿಯಾಗಿದ್ದಳು.30 ನಿಮಿಷಗಳ ಕಾಲ ಇಬ್ಬರೂ ಮಾತನಾಡಿದರು. ಒಂದು ವರ್ಷದ ನಂತರ ಇದು ಅವರ ಮೊದಲ ಭೇಟಿ ಎಂದು ಜೈಲಿನ ಮೂಲಗಳು ತಿಳಿಸಿವೆ.ಮುರುಗನ್, ಸಂತಾನ್ ಮತ್ತು ಎ.ಜಿ.ಪೇರ್‌ಅರಿವಳನ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಗಳನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಕಳೆದ ತಿಂಗಳು ತಿರಸ್ಕರಿಸಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.