ನವಜಾತ ಶಿಶುವಿನ ಅಪಹರಣ: ಆರೋಪಿ ಮಹಿಳೆಯ ಬಂಧನ
ಹೊಸಕೋಟೆ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ನವಜಾತ ಶಿಶುವಿನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 24 ಗಂಟೆಯೊಳಗೆ ಅರೋಪಿ ಮಹಿಳೆಯೊಬ್ಬಳನ್ನು ಬಂಧಿಸಿ ಮಗುವನ್ನು ಅವರ ಪೋಷಕರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೋಲಾರ ಜಿಲ್ಲೆ ಉರುಟು ಅಗ್ರಹಾರ ಗ್ರಾಮದ ಮಂಜುಳಾ (25) ಬಂಧಿತ ಆರೋಪಿ. ಕಾಡುಗೋಡಿ ಮೂಲದ ಮಂಜುಳಾ ಕಳೆದ ನಾಲ್ಕು ವರ್ಷಗಳ ಕೆಳಗೆ ಉರುಟು ಅಗ್ರಹಾರದ ನಾಗೇಂದ್ರ ಎಂಬುವವರ ಜೊತೆ ಆಕೆಯ ವಿವಾಹವಾಗಿತ್ತು. ಆದರೆ ಅವರಿಗೆ ಮಕ್ಕಳಾಗಿರಲಿಲ್ಲ. ಮಗುವೊಂದನ್ನು ಪಡೆಯುವ ಹಂಬಲದಿಂದ ತಾನು ಬುಧವಾರ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ಬಂದು ಆಗ ತಾನೇ ಹುಟ್ಟಿದ ಹೆಣ್ಣು ಮಗುವೊಂದನ್ನು ಅಪಹರಿಸಿದ್ದಾಗಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾಳೆ.
ಅಪಹರಣದ ನಂತರ ಮಗುವಿಗೆ ಉಸಿರಾಟದ ತೊಂದರೆ ಇದ್ದುದರಿಂದ ಆಕೆ ವೈಟ್ಫೀಲ್ದ್ ಬಳಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಳು. ಮಾಹಿತಿ ಪಡೆದ ಸಬ್ ಇನ್ಸ್ಪೆಕ್ಟರ್ ಶಿವರಾಜ್ ಹಾಗು ಸಿಬ್ಬಂದಿ ಆರೋಪಿಯನ್ನು ಬಂಧಿಸಿ ಮೊಕದ್ದಮೆ ದಾಖಲಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.