ಗುರುವಾರ , ಮೇ 6, 2021
21 °C

ನವೆಂಬರ್‌ನಲ್ಲಿ ಜಾತಿ ಗಣತಿಯ ಸಮೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಜಿಲ್ಲೆಯಲ್ಲಿ ಬಡತನ ರೇಖೆ ಗಿಂತ ಕೆಳಗಿರುವ ಕುಟುಂಬಗಳನ್ನು ಗುರುತಿಸುವ ಸಲುವಾಗಿ ಇದೇ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ 2 ಹಂತದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿಯ ಸಮೀಕ್ಷೆ ನಡೆಯಲಿದೆ.ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಈ ಗಣತಿ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಎ್ಲ್ಲಲ ರೀತಿಯ ಸಹಕಾರ ನೀಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಚಂದ್ರೇಗೌಡ ಅವರು ಮನವಿ ಮಾಡಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಮಂಗಳವಾರ ಜಿಲ್ಲೆಯಲ್ಲಿ ಬಿಪಿಎಲ್ ಕುಟುಂಬಗಳ ಸಮೀಕ್ಷಾ ಕಾರ್ಯ ನಡೆಸುವ ಬಗ್ಗೆ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮಾಸ್ಟರ್ ಟ್ರೈನರ್ಸ್‌ಗಳ ನೇಮಕ: ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ನಡೆಯುವ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿ ಸಮೀಕ್ಷೆಯನ್ನು ಪರಿಣಾಮ ಕಾರಿಯಾಗಿ ಮಾಡಲು ಜಿಲ್ಲಾ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಮಚ್ಚಾಡೋ ಹಾಗೂ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಸುರೇಶ್ ಅವರನ್ನು ಮಾಸ್ಟರ್ ಟ್ರೈನರ್ಸ್‌ಗಳನ್ನಾಗಿ ನಿಯೋಜಿಸಲು ನಿರ್ಧರಿಸಲಾಯಿತು.ಮಾಸ್ಟರ್ ಟ್ರೈನರ್ಸ್‌ಗಳಿಗೆ ಇದೇ ತಿಂಗಳ 14ರಿಂದ ಮೈಸೂರಿನಲ್ಲಿ ತರಬೇತಿ ನಡೆಯಲಿದೆ. ನಂತರ ಮಾಸ್ಟರ್ ಟ್ರೈನರ್ಸ್‌ಗಳು ಸಾಮಾಜಿಕ, ಆರ್ಥಿಕ ಹಾಗೂ ಜಾತಿ ಗಣತಿ ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸುವ ಮೇಲ್ವಿ ಚಾರಕರು ಹಾಗೂ ಗಣತಿದಾರರಿಗೆ ತರಬೇತಿ ನೀಡಲಿದ್ದಾರೆ ಎಂದು ಚಂದ್ರೇಗೌಡ ಅವರು ಸಭೆಗೆ ತಿಳಿಸಿದರು.ಜಿ.ಪಂ.ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಎನ್.ಕೃಷ್ಣಪ್ಪ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 1,45,273 ಮನೆ ಗಳಿದ್ದು ಸರ್ಕಾರದ ನಿರ್ದೇಶನದಂತೆ 1095 ಗಣತಿದಾರರ ಬ್ಲಾಕ್‌ಗಳನ್ನು ರಚಿಸಲಾಗಿದೆ. ಪ್ರತಿ 4 ಬ್ಲಾಕ್‌ಗೆ ಒಬ್ಬ ರಂತೆ 276 ಗಣತಿದಾರರನ್ನು ಹಾಗೆ ಯೇ 180 ಮೇಲ್ವಿಚಾರಕರನ್ನು ಈ ಸಮೀಕ್ಷೆಗೆ ನಿಯೋಜಿಸಬೇಕಿದೆ ಎಂದು ಅವರು ಮಾಹಿತಿ ನೀಡಿದರು.ಗಣತಿಯ ಸಮೀಕ್ಷಾ ಮಾಹಿತಿಯನ್ನು ಜಿಲ್ಲಾ ಮಟ್ಟದಲ್ಲಿ ಕ್ರೋಢೀಕರಿಸಬೇಕು. ತಾಲ್ಲೂಕಿನಲ್ಲಿರುವ 4 ಎನ್ಯೂಮರೇಷನ್ ಬ್ಲಾಕ್ (ಇ.ಬಿ)ನ ಆಧಾರದ ಮೇಲೆ ಒಬ್ಬ ಗಣತಿದಾರರನ್ನು ಹಾಗೂ 6 ಗಣತಿದಾರರಿಗೆ ಒಬ್ಬ ಮೇಲ್ವಿಚಾರಕ ರನ್ನು ಅಥವಾ ಸಂದರ್ಭಕ್ಕೆ ಅನುಗುಣ ವಾಗಿ ಬೇಕಾಗುವ ಸಿಬ್ಬಂದಿಯ ಮಾಹಿತಿ ಯನ್ನು ಜಿಲ್ಲಾ ಸಮಿತಿಗೆ ಒದಗಿಸಬೇಕು ಎಂದು ಅವರು ತಿಳಿಸಿದರು.ಸಮಿತಿಯ ಸದಸ್ಯ ಕಾರ್ಯದರ್ಶಿ ಯಾದ ಜಿ.ಪಂ. ಮುಖ್ಯ ಯೋಜನಾ ಧಿಕಾರಿ ಸಿದ್ದಯ್ಯ ಮತ್ತು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಪ್ರಭುಸ್ವಾಮಿ ಅವರು ಜಿಲ್ಲೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿಯನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ಹಲವು ಮಾಹಿತಿ ನೀಡಿದರು.ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಾಜೇಶ್ ಜಿ.ಗೌಡ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಹಮ್ಮದ ಹಬಿಬುಲ್ಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯತಿರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ವಿಜಯ ಲಕ್ಷ್ಮಿ ಶೆಣೈ, ನಗರಸಭೆ ಆಯುಕ್ತ ಶಶಿ ಕುಮಾರ, ಸಾರ್ವಜನಿಕ ಶಿಕ್ಷಣ ಇಲಾ ಖೆಯ ದೈಹಿಕ ಶಿಕ್ಷಣಾಧಿಕಾರಿ ಕರೀ ಗೌಡ, ಮಾಹಿತಿ ತಂತ್ರಜ್ಞಾನ ಅಧಿಕಾರಿ ಸತ್ಯನಾರಾಯಣ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.