ಭಾನುವಾರ, ಏಪ್ರಿಲ್ 11, 2021
31 °C

ನಾಗಪುರದಲ್ಲೂ ಲಾಠಿ ಚಾರ್ಜ್!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಗಪುರ (ಪಿಟಿಐ):  ಭಾರತ-ದಕ್ಷಿಣ ಆಫ್ರಿಕಾ ನಡುವೆ ಶನಿವಾರ ಇಲ್ಲಿ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯಕ್ಕೆ ಟಿಕೆಟ್ ಖರೀದಿಸುವಾಗ ನೂಕುನುಗ್ಗಲು ಸಂಭವಿಸಿದ್ದು ಅಭಿಮಾನಿಗಳ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.ಸಿವಿಲ್ ಲೈನ್ಸ್‌ನಲ್ಲಿರುವ ವಿದರ್ಭ ಕ್ರಿಕೆಟ್ ಸಂಸ್ಥೆಯ ಹಳೆಯ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದೆ. ಇಲ್ಲಿಂದ 20 ಕಿ.ಮೀ. ದೂರದ ಜಾಮ್ತಾದಲ್ಲಿರುವ ನೂತನ ಕ್ರೀಡಾಂಗಣದಲ್ಲಿ ಮಾರ್ಚ್ 12ರಂದು ಪಂದ್ಯ ನಡೆಯಲಿದೆ.ಈ ಪಂದ್ಯ ವೀಕ್ಷಿಸಲು ಟಿಕೆಟ್ ಖರೀದಿಸಲು ಅಭಿಮಾನಿಗಳು ಸೋಮವಾರ ರಾತ್ರಿಯಿಂದಲೇ ಸಾಲಿನಲ್ಲಿ ನಿಂತಿದ್ದರು. ಮಂಗಳವಾರ ಬೆಳಿಗ್ಗೆ ಟಿಕೆಟ್ ಕೌಂಟರ್ ತೆರೆದಾಗ ಒಮ್ಮೆಲೇ ನೂಗುನುಗ್ಗಲು ಸಂಭವಿಸಿತು. ಅಡ್ಡ ಇಟ್ಟಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಕೌಂಟರ್‌ನತ್ತ ನುಗ್ಗಿದರು ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ನೂಕುನುಗ್ಗಲನ್ನು ತಡೆಯಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಹಾಗಾಗಿ ಸಂಘಟಕರು ಟಿಕೆಟ್ ಕೌಂಟರ್‌ಅನ್ನು ಕೆಲಕಾಲ ಮುಚ್ಚಿದ್ದರು. ಬಳಿಕ ಮತ್ತೆ ತೆರೆದರು.ಲಾಠಿ ಪ್ರಹಾರದಲ್ಲಿ ಕೆಲ ಅಭಿಮಾನಿಗಳು ಗಾಯಗೊಂಡಿದ್ದಾರೆ. ಭಾರತ-ಇಂಗ್ಲೆಂಡ್ ನಡುವಿನ ಪಂದ್ಯಕ್ಕೆ ಟಿಕೆಟ್ ಖರೀದಿಸುವಾಗ ಕೂಡ ಬೆಂಗಳೂರಿನಲ್ಲಿ ಲಾಠಿ ಚಾರ್ಜ್ ನಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.