ಮಡಿಕೇರಿ: ಅಧಿಕಾರಿಗಳು ನಾಗರಿಕ ಸೇವಾ ಕಾಯ್ದೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು ಸಾರ್ವಜನಿಕರ ಸೇವೆಗಾಗಿ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ವಿ.ಪ್ರಸಾದ್ ಅವರು ಹೇಳಿದರು.

ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಜಿಲ್ಲಾಡಳಿತ ಮತ್ತು ಜಿಲ್ಲಾ ತರಬೇತಿ ಸಂಸ್ಥೆ ಕೊಡಗು, ಜಿ.ಪಂ. ಕೊಡಗು ಇವರ ಸಂಯುಕ್ತಾಶ್ರಯದಲ್ಲಿ ಕೋಟೆ ವಿಧಾನ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ನಾಗರಿಕ ಸೇವಾ ಖಾತರಿ ಅಧಿನಿಯಮ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಾರ್ಮಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಿಂಕಲಪ್ಪ ಅವರು ಮಾತನಾಡಿ, ಸರ್ಕಾರ ನಾಗರಿಕ ಸೇವಾ ಖಾತರಿ ಅಧಿನಿಯಮದಡಿ ಪ್ರತಿ ಸೇವೆಗೆ ಗರಿಷ್ಠ ಅವಧಿ ನಿಗದಿ ಪಡಿಸಿದ್ದರೂ, ಆದಷ್ಟು ಬೇಗ ಕೆಲಸ ಮಾಡಿಕೊಡಬೇಕು ಎಂದರು.

ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಕೃಷ್ಣಪ್ಪ ಅವರು ಮಾತನಾಡಿ, ಸಾರ್ವಜನಿಕರ ವಿಶ್ವಾಸಗಳಿಸಿ ಕೆಲಸ ಮಾಡಿ ನಿಗದಿತ ವೇಳೆಯಲ್ಲಿ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸುವಂತೆ ತಿಳಿಸಿದರು.
ಎ.ಟಿ.ಐ ನ ತರಬೇತಿದಾರ ದಿವಾಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಿ.ಪಂ. ಉಪಕಾರ್ಯದರ್ಶಿ ಬಸವರಾಜಪ್ಪ ಸ್ವಾಗತಿಸಿ, ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.