ಪ್ರಜಾವಾಣಿ ವಾರ್ತೆ
ಬೆಂಗಳೂರು: ನಾಡಪ್ರಭು ಕೆಂಪೇಗೌಡ ದಿನಾಚರಣೆ ಅಂಗವಾಗಿ ಬಿಬಿಎಂಪಿ ನೀಡಲಿರುವ ವಾರ್ಷಿಕ ಕೆಂಪೇಗೌಡ ಪ್ರಶಸ್ತಿಗೆ ನಾಲ್ಕು ನೂರಕ್ಕೂ ಅಧಿಕ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, ಬಹುಶಃ ಮಂಗಳವಾರ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿಯನ್ನು ಪಾಲಿಕೆ ಅಂತಿಮಗೊಳಿಸುವ ಸಾಧ್ಯತೆಯಿದೆ.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುವ ಗಣ್ಯರನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಆದರೆ, ವರ್ಷದಿಂದ ವರ್ಷಕ್ಕೆ ಪ್ರಶಸ್ತಿಯ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತಿದೆ. ಕಳೆದ ವರ್ಷ ಕೂಡ 286 ಮಂದಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಈ ವರ್ಷ 25ರಿಂದ 30 ಮಂದಿಗೆ ಪ್ರಶಸ್ತಿ ನೀಡಲಾಗುತ್ತದೆ ಎಂದು ಪಾಲಿಕೆ ಹೇಳುತ್ತಿದೆಯಾದರೂ, ಆಕಾಂಕ್ಷಿಗಳ ಪಟ್ಟಿಯನ್ನು ಗಮನಿಸಿದರೆ ಪ್ರಶಸ್ತಿ ಪುರಸ್ಕೃತರ ಪಟ್ಟಿ ಹಿರಿದಾಗುವ ಎಲ್ಲ ಸಾಧ್ಯತೆಗಳು ಕಂಡು ಬರುತ್ತಿವೆ.

ಏ. 6ರಂದು ನಡೆಯಲಿರುವ ನಾಡಪ್ರಭು ಕೆಂಪೇಗೌಡ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಪ್ರಶಸ್ತಿಗೆ ಆಯ್ಕೆಯಾದವರಿಗೆ 25 ಸಾವಿರ ರೂಪಾಯಿ ನಗದು, ಕೆಂಪೇಗೌಡ ಸ್ಮರಣಿಕೆ ಹಾಗೂ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಏ. 25ರಂದು ಸಂಜೆ ನಡೆಯಲಿರುವ ಸಮಾರಂಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ಪಾಲಿಕೆಯ 125 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಲಾಗುತ್ತದೆ. ಕಳೆದ ವರ್ಷ 250 ಮಂದಿಯನ್ನು ಸನ್ಮಾನಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.