ಕೆಂಗೇರಿ: `ಶಿಥಿಲಗೊಂಡಿರುವ ಪುರಾತನ ದೇವಾಲಯಗಳನ್ನು ಗುರುತಿಸಿ ಪುನರ್ ನಿರ್ಮಾಣಗೊಳಿಸುವ ಮೂಲಕ ನಾಡಿನ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕಿದೆ~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಮಾಗಡಿ ರಸ್ತೆಯ ಕೊಡಿಗೇಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಆದಿಶಕ್ತಿ ಮದನಘಟ್ಟಮ್ಮ ದೇವಿ ಪ್ರತಿಷ್ಠಾಪನಾ ಸಮಾರಂಭದಲ್ಲಿ ಇತ್ತೀಚೆಗೆ ಪಾಲ್ಗೊಂಡು ಅವರು ಮಾತನಾಡಿದರು.

`ದೇವಾಲಯಗಳು ಕಷ್ಟದ ಸಮಯದಲ್ಲಿ ಜನರಿಗೆ ನೆಮ್ಮದಿ ಕೊಡುವ ತಾಣಗಳಾಗಿವೆ. ದೇಶದಲ್ಲಿ ಮಠ ಮಾನ್ಯಗಳಿಗೆ, ಗುರು ಪರಂಪರೆಗೆ ತನ್ನದೇ ಆದ ವಿಶಿಷ್ಟ ಸ್ಥಾನವಿದೆ. ಗುರುವಿನ ಸೇವೆ ಮಾಡುವುದರೊಂದಿಗೆ ನಮ್ಮಲ್ಲಿರುವ ಕತ್ತಲನ್ನು ದೂರ ಮಾಡಿ ಬೆಳಕಿನೆಡೆಗೆ ಸಾಗಬೇಕಿದೆ~ ಎಂದು ಅವರು ಹೇಳಿದರು.

ಸಿದ್ಧಗಂಗಾ ಮಠಾಧ್ಯಕ್ಷ ಡಾ. ಶಿವಕುಮಾರ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಯಾದವ ಮಠದ ಕೃಷ್ಣಯಾದವಾನಂದ ಸ್ವಾಮೀಜಿ, ಶಿವಗಂಗಾ ಕ್ಷೇತ್ರ ಮೇಲಣಗವಿ ಮಠದ ಮಲಯ ಶಾಂತಮುನಿ ಸ್ವಾಮಿ, ಬೋವಿ ಗುರುಪೀಠಾಧ್ಯಕ್ಷ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿ, ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮಿ ಭಾಗವಹಿಸಿದ್ದರು.

ಸಚಿವರಾದ ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಗ್ರಾ.ಪಂ. ಅಧ್ಯಕ್ಷ ಯಜಮಾನ್ ನಂಜುಂಡೇಶ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.