ಸಾಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದು, ಪಕ್ಷ ಇದಕ್ಕೆ ಅವಕಾಶ ನೀಡಿದರೆ ಕಣಕ್ಕೆ ಇಳಿಯುವುದಾಗಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು.

80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಿಯೋಜಿತರಾಗಿರುವ ಸಾಹಿತಿ ಡಾ.ನಾ.ಡಿಸೋಜ ಅವರನ್ನು ಮಂಗಳ ವಾರ ಅವರ ನಿವಾಸದಲ್ಲಿ ಅಭಿನಂದಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಒಂದು ವೇಳೆ ಕಾಂಗ್ರೆಸ್ ಪಕ್ಷ ಸ್ಪರ್ಧೆಗೆ ಅವಕಾಶ ನೀಡದೆ ಇದ್ದರೂ ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೆಯೊ ಅವರ ಪರವಾಗಿ ಕೆಲಸ ಮಾಡುತ್ತೇನೆ ಯೇ ಹೊರತು ಪಕ್ಷದ ವಿರುದ್ಧ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅಡಿಕೆ ಬೆಳೆಯನ್ನು ಯಾವುದೇ ಕಾರಣಕ್ಕೂ ನಿಷೇಧಿಸುವುದಿಲ್ಲ ಎಂದು ಕೇಂದ್ರದ ಆರೋಗ್ಯ ಸಚಿವ ಗುಲಾಂ ನಬಿ ಅಜಾದ್ ಅವರೊಂದಿಗೆ ಚರ್ಚಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕಾರಣ ಅಡಿಕೆ ಬೆಳೆಗಾರರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದರು.

ಜಿ.ಡಿ. ನಾರಾಯಣಪ್ಪ, ತಬಲಿ ಬಂಗಾರಪ್ಪ, ಮಂಡಗಳಲೆ ಹುಚ್ಚಪ್ಪ, ಮಹಮದ್ ಖಾಸಿಂ, ಕೆ.ಜಿ.ಪ್ರಶಾಂತ್, ಎಚ್.ಎನ್.ದಿವಾಕರ್, ರವಿ ಕುಗ್ವೆ, ದಿನೇಶ್ ಬರದವಳ್ಳಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.