ಭಾನುವಾರ, ಜೂನ್ 20, 2021
20 °C

ನಾಮಪತ್ರ ಸಲ್ಲಿಸಿದ ಅನಂತ್‌ಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 2014ರ ಲೋಕಸಭಾ ಚುನಾವಣೆಗೆ ಅಧಿಸೂಚನೆ ಹೊರಡಿಸಲಾದ ಬೆನ್ನಲ್ಲೆ ವಿವಿಧ ಪಕ್ಷಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಬಿಜೆಪಿ ಅಭ್ಯರ್ಥಿಗಳಾದ ಅನಂತ್‌ ಕುಮಾರ್‌ ಹಾಗೂ ಪಿ.ಸಿ.ಮೋಹನ್‌ ಅವರು  ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅನಂತ್‌ಕುಮಾರ್‌ ಅವರು ಜಯನಗರದ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಬಿಜೆಪಿ ಮುಖಂಡ ಆರ್‌. ಅಶೋಕ್‌ ಸೇರಿದಂತೆ ಪಕ್ಷದ ಹಲವು ನಾಯಕರು ಹಾಗೂ ಬೆಂಬಲಿಗರು ಉಪಸ್ಥಿತರಿದ್ದರು.

ಇತ್ತ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಪಿ.ಸಿ. ಮೋಹನ್‌ ಅವರು ಬಿಬಿಎಂಪಿ ಕೇಂದ್ರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.