ಗುರುವಾರ , ಏಪ್ರಿಲ್ 15, 2021
21 °C

ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಪೋಕ್ಲು: ಯುವಕರ ವಿದ್ಯಾರ್ಥಿ ಜೀವನದಲ್ಲೇ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ಇದರಿಂದ ದೇಶದ ಏಳಿಗೆ ಸಾಧ್ಯ ಎಂದು ನಿವೃತ್ತ ಶಿಕ್ಷಕ ಬಾದುಮಂಡ ಮುತ್ತಪ್ಪ ಹೇಳಿದರು.ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಎನ್‌ಎಸ್‌ಎಸ್ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಎನ್‌ಎಸ್‌ಎಸ್ ಶಿಬಿರದಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿ ಯಾಗಲಿದೆ. ವಿದ್ಯಾರ್ಥಿಗಳು ಸಮಾಜಸೇವೆಯನ್ನು ತಮ್ಮ ಬದುಕಿನಲ್ಲಿ ನಿರಂತರವಾಗಿ ರೂಢಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು. ಗುರು ಹಿರಿಯರನ್ನು ಗೌರವಿಸಬೇಕು ಎಂದು ಸಲಹೆ ನೀಡಿದರು.ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಕೆನರಾಬ್ಯಾಂಕ್ ವ್ಯವಸ್ಥಾಪಕ ಕೆ.ಸಿ.ನಾಣಯ್ಯ ನೆರವೇರಿಸಿದರು. ಚಾಮುಂಡೇಶ್ವರಿ ವಿದ್ಯುತ್ ನಿಗಮ ಆಯೋಜಿಸಿದ್ದ ಮೈಸೂರು ವಲಯಮಟ್ಟದ ಚರ್ಚಾಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಟಿ.ಆರ್.ವರ್ಷಾ ಅವಳಿಗೆ ಶಾಲಾಭಿವೃದ್ಧಿ ಸಮಿತಿ ಸದಸ್ಯ ಬಿದ್ದಾಟಂಡ ತಮ್ಮಯ್ಯ ಬಹುಮಾನ ವಿತರಿಸಿದರು.

 

ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕರವಂಡ ಲವ ನಾಣಯ್ಯ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂಸಿ ಅಧ್ಯಕ್ಷ ಇಬ್ರಾಹಿಂ, ತಾಲ್ಲೂಕು ಪಂಚಾಯಿತಿ ಸದಸ್ಯೆ ಕಾಂಡಂಡ ಪ್ರತಿಜಾ ಅಚ್ಚಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಲೀಂ ಹ್ಯಾರೀಸ್, ಕಾಲೇಜು ಅಭಿವೃದ್ಧಿ  ಸಮಿತಿ ಸದಸ್ಯ ಚೋಕಿರ ಪ್ರಭು, ಶಿಕ್ಷಕಿ ಜ್ಯೋತಿ ಶೆಟ್ಟಿ ಮಹಾಂತೇಶ್ ಕೋಟಿ, ಎನ್‌ಎಸ್‌ಎಸ್ ಅಧಿಕಾರಿ ಎನ್.ಬಿ. ಕಿಶೋರ್ ಕುಮಾರ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.