ಭಾನುವಾರ, ಏಪ್ರಿಲ್ 18, 2021
33 °C

ನಾಯಕತ್ವ ಗುಣ ಬೆಳೆಸಿಕೊಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಸಮಾಜದಲ್ಲಿರುವ ಅಸಮಾನತೆಯನ್ನು ಹೊಡೆ ದೋಡಿಸಿ, ದೇಶದಲ್ಲಿ ಬದಲಾವಣೆ ತರಲು ಯುವಕರು ಮುಂದೆ ಬರಬೇಕೆಂದು ಸ್ವಾಮಿ ವಿವೇಕಾನಂದ ಯುವ ಸಂಘಟನೆಯ ಸ್ಥಾಪಕ ಡಾ. ಆರ್.ಬಾಲಸುಬ್ರಮಣ್ಯಂ ಅಭಿಪ್ರಾಯಪಟ್ಟರು.ಡೈಮಂಡ್ ಜುಬಿಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಆಯೋಜಿಸಲಾಗಿದ್ದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಪದವಿ ಹಾಗೂ ಪದವಿಪೂರ್ವ ಕಾಲೇಜಿನ `ಪ್ರತಿಭಾ ಶೋಧ~ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.ದೇಶದಲ್ಲಿ ಅಸಮಾನತೆ ತಾಂಡವವಾಡಿ ಗ್ರಾಮೀಣ ಭಾಗಕ್ಕೆ ಮೂಲ ಸೌಕರ್ಯಗಳು ಸಿಗುತ್ತಿಲ್ಲ, ಇಂತಹ ಸಮಸ್ಯೆ ಗಳನ್ನು ಕೊನೆಗಾಣಿಸಬೇಕಾದರೆ ಯುವಕರು ನಾಯಕತ್ವ ಗುಣ ಬೆಳೆಸಿಕೊಂಡು ಎಲ್ಲಾ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೇಶವನ್ನು ಬದಲಾವಣೆಯ ಹಾದಿಯಲ್ಲಿ ನಡೆಸುವ ಜವಾಬ್ದಾರಿ ಹೊರಬೇಕು ಎಂದರು.ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಸಂಸ್ಥೆಯ ಕಾರ್ಯದರ್ಶಿ ಎಸ್.ಎಲ್. ರಾಮಚಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದಲ್ಲಿ ಜರುಗು ತ್ತಿರುವ ಅನ್ಯಾಯಗಳನ್ನು ಮಾಧ್ಯಮದಲ್ಲಿ ಕಂಡರೂ ಸಹ ಅದನ್ನು ವಿರೋಧಿಸುವ ಕೆಲಸಕ್ಕೆ ಕೈ ಹಾಕುತ್ತಿಲ್ಲ, ಇದಕ್ಕೆ ಸ್ವಾರ್ಥವೇ ಮೂಲ ಕಾರಣ. ವಿದ್ಯಾರ್ಥಿಗಳು ಸ್ವಾರ್ಥ ಬದುಕಿನಿಂದ ಹೊರಬಂದು ಅನ್ಯಾಯಗಳ ವಿರುದ್ಧ ಧ್ವನಿಯೆತ್ತಿದರೆ ಮಾತ್ರ ದೇಶವನ್ನು ಅಭಿವೃದ್ಧಿ ಮಾರ್ಗದಲ್ಲಿ ಕೊಂಡೊಯ್ಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಎಂ.ಸಿ ಕಾಲೇಜಿನ ನಿರ್ದೇಶಕ ಟಿ.ಕೆ.ಚಿತ್ತರಂಜನ್ ಮಾತನಾಡಿದರು, ಎನ್‌ಐಇ ಪದವಿ ಕಾಲೇಜಿನ ಪ್ರಾಂಶುಪಾಲೆ ಮೀನಾ ಶೇಖರ್, ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಸುಮ ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಜನಮನಸೊರೆಗೊಂಡಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.