ಬುಧವಾರ, ಮೇ 19, 2021
27 °C

ನಾಯಕ ಮಹೇಂದ್ರ ಸಿಂಗ್ ದೋನಿಗೆ ಆರನೇ ಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದುಬೈ (ಪಿಟಿಐ): ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ದೋನಿ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಏಕದಿನ ರ‌್ಯಾಂಕಿಂಗ್ ಪಟ್ಟಿಯಲ್ಲಿ ಬ್ಯಾಟ್ಸ್ ಮನ್‌ಗಳ ವಿಭಾಗದಲ್ಲಿ ಆರನೇ ಸ್ಥಾನ ಪಡೆದಿದ್ದಾರೆ.ಇಂಗ್ಲೆಂಡ್ ವಿರುದ್ಧ ಇತ್ತೀಚೆಗೆ ನಡೆದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ತಂಡ ಕಳಪೆ ಪ್ರದರ್ಶನ ನೀಡಿದ್ದರೂ, ದೋನಿ ಬ್ಯಾಟಿಂಗ್‌ನಲ್ಲಿ ಮಿಂಚಿದ್ದರು. ಈ ಕಾರಣ ಅವರು ಪಟ್ಟಿಯಲ್ಲಿ ಮೂರು ಕ್ರಮಾಂಕ ಮೇಲಕ್ಕೇರಿದ್ದಾರೆ.ದೋನಿ ಈ ಸರಣಿಯಲ್ಲಿ 79ರ ಸರಾಸರಿಯಲ್ಲಿ ಒಟ್ಟು 236 ರನ್ ಪೇರಿಸಿದ್ದರು. ವಿರಾಟ್ ಕೊಹ್ಲಿ ಮೂರು ಕ್ರಮಾಂಕ ಕೆಳಕ್ಕೆ ಕುಸಿದು 9ನೇ ಸ್ಥಾನ ಪಡೆದಿದ್ದರು. ಅಗ್ರ ಹತ್ತರಲ್ಲಿ ಕಾಣಿಸಿಕೊಂಡ ಭಾರತದ ಬ್ಯಾಟ್ಸ್‌ಮನ್‌ಗಳು ಇವರಿಬ್ಬರು ಮಾತ್ರ. ರಾಹುಲ್ ದ್ರಾವಿಡ್ 118ನೇ ಸ್ಥಾನದೊಂದಿಗೆ ತಮ್ಮ ಏಕದಿನ ಕ್ರಿಕೆಟ್ ಜೀವನಕ್ಕೆ ತೆರೆ ಎಳೆದಿದ್ದಾರೆ.ಸುರೇಶ್ ರೈನಾ ಐದು ಕ್ರಮಾಂಕ ಮೇಲಕ್ಕೇರಿದ್ದು, 30ನೇ ಸ್ಥಾನ ಗಿಟ್ಟಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಈ ಎಡಗೈ ಬ್ಯಾಟ್ಸ್‌ಮನ್ 198 ರನ್ ಕಲೆಹಾಕಿದ್ದರು. ಈ ಹಿಂದಿನ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದ್ದ ಇಂಗ್ಲೆಂಡ್‌ನ ಜೊನಾಥನ್ ಟ್ರಾಟ್ ನಾಲ್ಕನೇ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.ಬೌಲರ್‌ಗಳ ವಿಭಾಗದಲ್ಲಿ ಭಾರತದ ರವಿಚಂದ್ರನ್ ಅಶ್ವಿನ್ 34 ಕ್ರಮಾಂಕ ಮೇಲಕ್ಕೇರಿದ್ದು, 41ನೇ ಸ್ಥಾನ ಪಡೆದಿದ್ದಾರೆ. ಪ್ರವೀಣ್ ಕುಮಾರ್ 21ನೇ ಸ್ಥಾನದಲ್ಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.