ಮಂಗಳವಾರ, ಜೂನ್ 15, 2021
21 °C

ನಾಯರ್‌ಗೆ ಅವಕಾಶ ನೀಡಲಾಗಿತ್ತು: ಕೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ವಿವಾದಾತ್ಮಕ ಅಂತರಿಕ್ಷ್-ದೇವಾಸ್ ಒಪ್ಪಂದಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ಅಭಿಪ್ರಾಯ ತಿಳಿಸಲು ಕೇಂದ್ರ ಸರ್ಕಾರ ತಮಗೆ ಅವಕಾಶ ನೀಡಲಿಲ್ಲ ಎಂಬ ಇಸ್ರೊ ಮಾಜಿ ಅಧ್ಯಕ್ಷ ಮಾಧವನ್ ನಾಯರ್ ಹೇಳಿಕೆಯನ್ನು ಕೇಂದ್ರವು ಗುರುವಾರ ತಳ್ಳಿ ಹಾಕಿದೆ.

`ಈ ಒಪ್ಪಂದಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಭಾಗಿಯಾಗಿರುವ ಕುರಿತಂತೆ ಸ್ಪಷ್ಟನೆ ನೀಡುವಂತೆ ಸೂಚಿಸಿ ಉನ್ನತ ಮಟ್ಟದ ತಂಡ 2001ರ ಜುಲೈ ತಿಂಗಳಲ್ಲಿ ಎಲ್ಲಾ 4 ಅಧಿಕಾರಿಗಳಿಗೆ ಪತ್ರಗಳನ್ನು ಕಳುಹಿಸಿತ್ತು~ ಎಂದು ಪ್ರಧಾನಿ ಕಚೇರಿ ರಾಜ್ಯ ಖಾತೆ ಸಚಿವ ವಿ.ನಾರಾಯಣ ಸ್ವಾಮಿ ರಾಜ್ಯಸಭೆಗೆ ತಿಳಿಸಿದರು.

10 ದಿನಗಳ ಒಳಗಾಗಿ ಸ್ಪಷ್ಟನೆ ನೀಡುವಂತೆ ಸೂಚಿಸಿ ಮಾಧವನ್ ನಾಯರ್, ಕೆ.ಆರ್. ಶ್ರೀಧರ ಮೂರ್ತಿ, ಎ ಭಾಸ್ಕರನಾರಾಯಣ ಮತ್ತು ಕೆ.ಎನ್. ಶಂಕರ ಅವರಿಗೆ ಪತ್ರಗಳನ್ನು ಕಳುಹಿಸಲಾಗಿತ್ತು ಎಂದು ಸಚಿವರು ಲಿಖಿತ ಹೇಳಿಕೆ ನೀಡಿದ್ದಾರೆ.

ಅಗತ್ಯ ಬಿದ್ದರೆ ಉನ್ನತ ಮಟ್ಟದ ತಂಡದ ಮುಂದೆ ಹಾಜರಾಗಬೇಕು ಎಂದೂ ನಾಲ್ವರಿಗೂ ತಿಳಿಸಲಾಗಿತ್ತು ಎಂದು ನಾರಾಯಣ ಸ್ವಾಮಿ ಸ್ಪಷ್ಟ ಪಡಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.