ಭಾನುವಾರ, ಮೇ 16, 2021
28 °C

ನಾಯ್ಡು ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಐಎಡಿಬಿ ಭೂ ಹಗರಣದ ಪ್ರಮುಖ ಆರೋಪಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಜಾಮೀನು ಅರ್ಜಿಯನ್ನು `ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯ~ ಸೋಮವಾರ ತಿರಸ್ಕರಿಸಿದ್ದು, ನ್ಯಾಯಾಂಗ ಬಂಧನದ ಅವಧಿಯನ್ನು ಅಕ್ಟೋಬರ್ 26 ರವರೆಗೆ ಮುಂದುವರೆಸಿ ಸೋಮವಾರ ಆದೇಶ ಹೊರಡಿಸಿದೆ.

ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ನ್ಯಾಯಾಂಗ ಬಂಧನದ ಅವಧಿ ಸೆ. 19ಕ್ಕೆ ಮುಕ್ತಾಯವಾಗಿತ್ತು. ಅವರ ಜಾಮೀನು ಅರ್ಜಿ ವಿಚಾರಣೆಯನ್ನು  ಕೈಗೆತ್ತಿಕೊಂಡ ನ್ಯಾಯಾಲಯ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಅ. 26ರ ವರೆಗೆ ವಿಸ್ತರಿಸಿದೆ. 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.