ನಾರಾಯಣಸ್ವಾಮಿ ಶೀಘ್ರ ಬಿಜೆಪಿಗೆ

7

ನಾರಾಯಣಸ್ವಾಮಿ ಶೀಘ್ರ ಬಿಜೆಪಿಗೆ

Published:
Updated:

ಬೆಂಗಳೂರು: ವಿಧಾನ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಕಳೆದ ಚುನಾವಣೆಯಲ್ಲಿ ಗೆದ್ದಿದ್ದ ವೈ.ಎ.ನಾರಾಯಣಸ್ವಾಮಿ ಅವರು ಸದ್ಯದಲ್ಲೇ ಬಿಜೆಪಿ ಸೇರಲಿದ್ದಾರೆ.ಮುಂದಿನ ಜೂನ್‌ನಲ್ಲಿ ನಡೆಯುವ ಚುನಾವಣೆಯನ್ನು ಬಿಜೆಪಿ ಅಭ್ಯರ್ಥಿಯಾಗಿಯೇ ಎದುರಿಸಲು ಸಿದ್ಧತೆ ನಡೆಸಿದ್ದು, ಇದಕ್ಕೆ ಪಕ್ಷವೂ ಒಪ್ಪಿಗೆ ಸೂಚಿಸಿದೆ.ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರು ನಾರಾಯಣಸ್ವಾಮಿ ಅವರ ಹೆಸರನ್ನು ಸೋಮವಾರ ಅಂತಿಮಗೊಳಿಸಿದ್ದಾರೆ.ಇದೇ ಸಂದರ್ಭದಲ್ಲಿ ಇನ್ನೂ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಬಗ್ಗೆಯೂ ಚರ್ಚೆ ನಡೆಸಿದರು. ನೈಋತ್ಯ ಪದವೀಧರ ಕ್ಷೇತ್ರಕ್ಕೆ ಹಾಲಿ ಸದಸ್ಯ ಡಿ.ಎಚ್.ಶಂಕರಮೂರ್ತಿ ಅವರನ್ನೇ ಕಣಕ್ಕೆ ಇಳಿಸಲು ನಿರ್ಧರಿಸಲಾಗಿದೆ.ಬೆಂಗಳೂರು ಪದವೀಧರ ಕ್ಷೇತ್ರದಿಂದ ಹಾಲಿ ಸದಸ್ಯ ರಾಮಚಂದ್ರ ಗೌಡ ಟಿಕೆಟ್‌ಗಾಗಿ ಲಾಬಿ ಆರಂಭಿಸಿದ್ದಾರೆ. ಎಬಿವಿಪಿ ಮತ್ತು ಆರ್‌ಎಸ್‌ಎಸ್‌ನ ಕೆಲ ಮುಖಂಡರು ಎ .ಎಚ್. ಆನಂದ ಪರ ಇದ್ದು, ಟಿಕೆಟ್ ವಿಷಯ ಅಂತಿಮವಾಗಿಲ್ಲ.ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ ಗಣೇಶ್ ಕಾರ್ಣಿಕ್ ಅವರನ್ನು ಕಣಕ್ಕೆ ಇಳಿಸಲಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಾಗರಾಜ್ ಮತ್ತು ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ್ ಅವರನ್ನು ಕಣಕ್ಕೆ ಇಳಿಸಲು ನಿರ್ಧರಿಸಲಾಗಿದೆ. ಸದ್ಯದಲ್ಲೇ ಹೆಸರು ಅಂತಿಮವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry