ಶನಿವಾರ, ಮೇ 21, 2022
23 °C

ನಾಲೆಗಳ ಆಧುನೀಕರಣಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಕೃಷ್ಣರಾಜಸಾಗರ ಅಣೆಕಟ್ಟಿನ ನಾಲೆಗಳ ಆಧುನೀಕರಣವನ್ನು ಎರಡು ಹಂತಗಳಲ್ಲಿ ಕೈಗೊಳ್ಳಬೇಕು ಎಂದು ರೈತ ಸಂಘದ ರಾಜ್ಯ ಮುಖಂಡ ಕೆ.ಎಸ್. ಪುಟ್ಟಣ್ಣಯ್ಯ ಆಗ್ರಹಿಸಿದರು.ಮೊದಲ ವರ್ಷ ವಿರಿಜಾ, ವರುಣಾ, ಮಾಧವಮಂತ್ರಿ, ರಾಮಸ್ವಾಮಿ ನಾಲೆಗಳನ್ನು ಹಾಗೂ ಎರಡನೇ ವರ್ಷದಲ್ಲಿ ವಿಶ್ವೇಶ್ವರಯ್ಯ ನಾಲೆಯನ್ನು ಆಧುನೀಕರಣಗೊಳಿಸಬೇಕು. ಇದರಿಂದ ರೈತರಿಗೂ ಅನುಕೂಲವಾಗತ್ತದೆ. ಮಳೆ ಬಂದರೆ ರೈತರು ಬಿತ್ತನೆ ಆರಂಭಿಸುತ್ತಾರೆ. ಯಾವ ನಾಲೆಗಳ ಆಧುನೀಕರಣ ಮಾಡಲಾಗುತ್ತದೆ ಎಂಬ ಕರಪತ್ರಗಳನ್ನು ಕೂಡಲೇ ಹೊರಡಿಸಬೇಕು ಎಂದು ಒತ್ತಾಯಿಸಿದರು.ನಾಲೆಗಳ ಆಧುನೀಕರಣ ಕುರಿತು ನೀರಾವರಿ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆಯಲಾಗವುದು. 22 ರಂದು ಮಖ್ಯಮಂತ್ರಿಗಳು ಕರೆದಿರುವ ಸಭೆಯಲ್ಲಿ ಈ ವಿಷಯದ ಬಗ್ಗೆ ಮಾತನಾಡಲಾಗುವುದು ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.`ಇಲ್ಲಿಯವರೆಗೆ ಮಾಡಿರುವ ನೀರು ನಿರ್ವಹಣೆ ಬಗೆಗೆ ಶ್ವೇತಪತ್ರ ಹೊರಡಿಸಬೇಕು. ಜಿಲ್ಲೆಯಲ್ಲಿ ಬಾಡುತ್ತಿರುವ ಬೆಳೆ ರಕ್ಷಣೆಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ, ಗುರುವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದರು.ಅಧಿಕಾರದಲ್ಲಿರುವ ಜನಪ್ರತಿನಿಧಿಗಳು ಮುಖ್ಯಮಂತ್ರಿ ಯಾರಾಗಬೇಕು ಎಂದು ಹೇಳುತ್ತಿದ್ದಾರೆ. ಆದರೆ ರೈತರ ಹೊಲಗಳಿಗೆ ನೀರು ಹೇಗೆ ಕೊಡಬಹುದು ಎಂಬ ಬಗ್ಗೆ ಚಿಂತಿಸುತ್ತಿಲ್ಲ. ಪ್ರತಿಪಕ್ಷಗಳವರೂ ಈ ಬಗೆಗೆ ಬಾಯಿ ಬಿಡುತ್ತಿಲ್ಲ ಎಂದು ಟೀಕಿಸಿದರು.ಕಳೆದ ವರ್ಷದ ಕಬ್ಬಿನ ಬಾಕಿ ಬಿಲ್ ಪಾವತಿಸಬೇಕು. ಪ್ರಸಕ್ತ ಸಾಲಿನ ಕಬ್ಬಿನ ಬೆಲೆ ನಿಗದಿ ಮಾಡಬೇಕು. ಈ ಕುರಿತು ಜಿಲ್ಲಾಧಿಕಾರಿಗಳು, ಸಕ್ಕರೆ ಕಾರ್ಖಾನೆಯವರ ಸಭೆ ಕರೆದು ಮಾತನಾಡಬೇಕು ಎಂದು ಆಗ್ರಹಿಸಿದರು.ರೇಷ್ಮೆ ಬೆಳೆಗಾರರ ರಕ್ಷಣೆ ಮಾಡಬೇಕು. ಆಮದು ಸುಂಕ ಹೆಚ್ಚು ಮಾಡಬೇಕು. ಬೆಲೆ ಪ್ರತಿ ಕೆಜಿಗೆ 300 ರೂಪಾಯಿಗಿಂತ ಕಡಿಮೆ ಆಗದಂತೆ ನೋಡಿಕೊಳ್ಳಬೇಕು. ಈ ಕುರಿತು ಕೇಂದ್ರದಲ್ಲಿ ಚರ್ಚೆ ನಡೆದಿರುವುದು ಒಳ್ಳೆಯ ಬೆಳವಣಿಗೆ ಎಂದರು.ರೈತ ಮುಖಂಡರಾದ ಶಂಭೂನಳ್ಳಿ ಸುರೇಶ್, ಮರಲಿಂಗೇಗೌಡ, ಕೆ.ಎಸ್. ಬಾಲಚಂದ್ರ, ಹನಿಯವಾಡಿ ನಾಗರಾಜು ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.