ಮಡಿಕೇರಿ: ಶ್ರೀಮಂಗಲ ಭಾಗದಲ್ಲಿ ಮಳೆಗಾಲದಲ್ಲಿ ಪ್ರವಾಹ ಭೀತಿಯನ್ನು ತಡೆಗಟ್ಟಲು ಈ ಹಿಂದೆಯೇ ನಿರ್ಮಿಸಿದ್ದ ನಾಲೆ ಜಾಗದ ಒತ್ತುವರಿ ತೆರವಿಗೆ ಹೈಕೋರ್ಟ್ ಸೂಚನೆ ನೀಡಿದ್ದರೂ, ಈ ಬಗ್ಗೆ ಕ್ರಮಗೊಳ್ಳದ ಜಿಲ್ಲಾಡಳಿತದ ವಿರುದ್ಧ ಪುನಃ ಕೋರ್ಟ್ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗುವುದು ಎಂದು ಶ್ರೀಮಂಗಲ– ಶೆಟ್ಟಿಗೇರಿಯ ರೇವತಿ ಚಂಗಪ್ಪ ತಿಳಿಸಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹ ಭೀತಿಯಿಂದ ತತ್ತರಿಸುತ್ತಿದ್ದ ಜನರನ್ನು ರಕ್ಷಿಸಲು ಈ ಹಿಂದೆಯೇ ನಾಲೆ ನಿರ್ಮಿಸಿ ಮಳೆಯ ನೀರು ಲಕ್ಷ್ಮಣ ತೀರ್ಥ ನದಿಗೆ ಹೋಗುವಂತೆ ಮಾಡಲಾಗಿತ್ತು ಎಂದರು.

ಆದರೆ ಇತ್ತೀಚಿನ ದಿನಗಳಲ್ಲಿ ಹಲವು ವ್ಯಕ್ತಿಗಳು ಈ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದರಿಂದ ಈ ಭಾಗದ ಜನರಿಗೆ ತೊಂದರೆಯಾಗುತ್ತಿದೆ. ಇದನ್ನು ತೆರವುಗೊಳಿಸುವ ಭರವಸೆಗಳು ಈಡೇರದ ಹಿನ್ನೆಲೆಯಲ್ಲಿ ಹೈಕೋರ್ಟ್ಗೆ 2012ರಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಇದನ್ನು ಪರಿಗಣಿಸಿದ ನ್ಯಾಯಾಲಯ, ಒತ್ತುವರಿ ಜಾಗದ ಸರ್ವೆಗೆ ಸೂಚಿಸಿದ್ದರಿಂದ ಆಗಿನ ಜಿಲ್ಲಾಧಿಕಾರಿ ಸೇರಿದಂತೆ ಪ್ರಮುಖ ಅಧಿಕಾರಿಗಳು ಸರ್ವೆ ಕಾರ್ಯ ಮಾಡಿಸಿ, ಈ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು ಎಂದರು.

ಈ ಮಾಹಿತಿ ಆಧಾರ ಮೇಲೆ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಸೂಚಿಸಲಾಗಿತ್ತು. ಇದುವರೆಗೆ ಜಿಲ್ಲಾಡಳಿತ ಯಾವುದೇ ಕ್ರಮಕೈಗೊಂಡಿಲ್ಲ. ಡಿ.23ರಂದು ನಡೆಯಲಿರುವ ಜಿಲ್ಲಾಧಿಕಾರಿ ಅವರ ಕೋರ್ಟ್ಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದ್ದಾರೆ ಎಂದರು.

ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನೀಡಿದ ಆದೇಶವನ್ನು ಉಲ್ಲಂಘಿಸಿರುವ ಜಿಲ್ಲಾಡಳಿತದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಶ್ರೀಮಂಗಲ ಕಾವೇರಿ ಬಡಾವಣೆಯ ನಿವಾಸಿಗಳಾದ ಶ್ರೀಪತಿ, ಕೆ.ಸಿ. ದೇವಯ್ಯ, ವಾಸು, ಕಾವೇರಮ್ಮ, ಶಾರದಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.