ಸೋಮವಾರ, ಮಾರ್ಚ್ 1, 2021
31 °C
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನಾ ಮೆರವಣಿಗೆ

ನಾಲ್ಕನೇ ದಿನಕ್ಕೆ ಅನಿರ್ದಿಷ್ಟಾವಧಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಲ್ಕನೇ ದಿನಕ್ಕೆ ಅನಿರ್ದಿಷ್ಟಾವಧಿ ಧರಣಿ

ಶಿರಸಿ: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.ಧರಣಿಯ ಭಾಗವಾಗಿ ಶಿರಸಿ ಉಪವಿಭಾಗ ವ್ಯಾಪ್ತಿಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ ಕಾಲೇಜುಗಳ ಅತಿಥಿ ಉಪನ್ಯಾಸಕರೆಲ್ಲ ಸೇರಿ ಗುರುವಾರ ಇಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು. ಅತಿಥಿ ಉಪನ್ಯಾಸಕರ ರಾಜ್ಯ ಸಮಿತಿ ಖಜಾಂಚಿ ಸಿದ್ದಾಪುರದ ಎನ್.ಟಿ.ನಾಯ್ಕ ಮಾತನಾಡಿ ‘ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿದೆ.ಹಿಂದಿನ ಸರ್ಕಾರಗಳು ಸಹ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ನಿರ್ಲಕ್ಷ್ಯಿಸಿದ್ದವು. ವಿದ್ಯಾರ್ಥಿಗಳ ಹಿತದೃಷ್ಟಿ ಹಾಗೂ ಅತಿಥಿ ಉಪನ್ಯಾಸಕರ ಸಮಸ್ಯೆ ಗಮನಿಸಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನೇ ಕಾಯಂಗೊಳಿಸ ಬೇಕು’ ಎಂದು ಒತ್ತಾಯಿಸಿದರು. ಜಿಲ್ಲಾ ಸಮಿತಿ ಕಾರ್ಯದರ್ಶಿ ವಿನಾಯಕ ಭಟ್ಟ ಮಾತನಾಡಿ ‘ಮಾನವೀಯ ಮೌಲ್ಯ ಮರೆತು ಸರ್ಕಾರಗಳು ನಮ್ಮನ್ನು ಬೀದಿಗೆ ತಳ್ಳುತ್ತಿವೆ’ ಎಂದರು.ಅತಿಥಿ ಉಪನ್ಯಾಸಕರ ಧರಣಿ ಬೆಂಬಲಿಸಿ ಪ್ರಜಾಸತ್ತಾತ್ಮಕ ಪದವೀಧರರ ವೇದಿಕೆ ಮೆರವಣಿಗೆಯಲ್ಲಿ ಭಾಗವಹಿಸಿತು. ವೇದಿಕೆ ಅಧ್ಯಕ್ಷ ಮಹೇಶ ನಾಯ್ಕ ಮಾತನಾಡಿ ‘ಅತಿಥಿ ಉಪನ್ಯಾಸಕರು ಇಲ್ಲದೇ ಸರ್ಕಾರಿ ಪದವಿ ಕಾಲೇಜುಗಳು ನಡೆಯುವುದಿಲ್ಲ. ಹೊಸದಾಗಿ ಬಂಡವಾಳ ಹೂಡಿ ಉದ್ಯೋಗ ಸೃಷ್ಟಿಸುವ ಬದಲಾಗಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು’ ಎಂದರು.ಶಿರಸಿಯ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿನಲ್ಲಿ 3200 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. 130ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಎಲ್ಲ ಅತಿಥಿ ಉಪನ್ಯಾಸಕರು ಧರಣಿಯಲ್ಲಿ ಭಾಗವಹಿಸಿರುವುದರಿಂದ ತರಗತಿಗೆ ಅಡ್ಡಿಯಾಗಿದೆ. ಪ್ರತಿದಿನವೂ ವಿದ್ಯಾರ್ಥಿಗಳು ಕಾಲೇಜಿಗೆ ಬಂದು ತರಗತಿ ಇಲ್ಲವೆಂದು ವಾಪಸ್ಸಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.ಧರಣಿಗೆ ವಿರೋಧ

ಅತಿಥಿ ಉಪನ್ಯಾಸಕರ ಧರಣಿಯಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ವೈಯಕ್ತಿಕ ಬೇಡಿಕೆಗಾಗಿ ವಿದ್ಯಾರ್ಥಿಗಳ ಹಿತ ಬಲಿಕೊಡುವುದು ಸರಿಯಲ್ಲ. ಶೈಕ್ಷಣಿಕ ವ್ಯವಸ್ಥೆಗೆ ಯಾವುದೇ ತೊಂದರೆ ಆಗದಂತೆ ಕ್ರಮಕೈಕೊಳ್ಳಬೇಕು ಎಂದು ಎನ್‌ಎಸ್‌ಯುಐ ಸಂಘಟನೆಯ ಶ್ರೀಧರ ಹೆಗಡೆ, ಅಮೋದ ಸಿರ್ಸಿಕರ ಇತರರು ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ನೀಡಿದರು***

ಈವರೆಗೆ ಅಧಿಕಾರಕ್ಕೆ ಬಂದಿರುವ ಎಲ್ಲ ಸರ್ಕಾರಗಳ ಉನ್ನತ ಶಿಕ್ಷಣ ಸಚಿವರು ಮೌಖಿಕ ಭರವಸೆ ನೀಡಿ ಅತಿಥಿ ಉಪನ್ಯಾಸಕರಿಗೆ ಅನ್ಯಾಯ ಮಾಡಿದ್ದಾರೆ.

-ರಾಜು ಮಾಕನೂರ,
ಜಿಲ್ಲಾ ಸಮಿತಿ ಉಪಾಧ್ಯಕ್ಷ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.