ಸೋಮವಾರ, ಜನವರಿ 20, 2020
20 °C

ನಾಲ್ವರಿಗೆ ಮಹಿಳಾ ವಿವಿ ಗೌರವ ಡಾಕ್ಟರೇಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಾಪುರ: ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ,  ರಂಗಭೂಮಿ ನಟಿ ಅರುಂಧತಿ ನಾಗ್, ಕ್ರೀಡಾಪಟು ಅಶ್ವಿನಿ ನಾಚಪ್ಪ,  ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿ ಅವರನ್ನು  ಕರ್ನಾಟಕ ಮಹಿಳಾ ವಿಶ್ವವಿದ್ಯಾಲಯ ಪ್ರಸಕ್ತ ಸಾಲಿನಲ್ಲಿ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಿದೆ.ಇದೇ 22ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿರುವ ಮಹಿಳಾ ವಿ.ವಿಯ ತೃತೀಯ ಘಟಿಕೋತ್ಸವದಲ್ಲಿ ಈ ನಾಲ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ ಗೀತಾ ಬಾಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರತಿಕ್ರಿಯಿಸಿ (+)