ಗುರುವಾರ , ಮೇ 26, 2022
22 °C

ನಾಲ್ವರು ಮಾಜಿ ಕಾನ್‌ಸ್ಟೆಬಲ್‌ಗಳಿಗೆ ಕಠಿಣ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಡೆಹ್ರಾಡೂನ್ (ಪಿಟಿಐ): ನಾಲ್ವರು ಮಾಜಿ ಕಾನ್‌ಸ್ಟೆಬಲ್‌ಗಳಿಗೆ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯವು ಏಳು ವರ್ಷಗಳ ಕಾಲ ಕಠಿಣ ಶಿಕ್ಷೆ ವಿಧಿಸಿದೆ.

ಹದಿನೇಳು ವರ್ಷಗಳ ಹಿಂದೆ ನಡೆದ ಗಲಭೆಯಲ್ಲಿ ವ್ಯಕ್ತಿಯೊಬ್ಬನ ಹತ್ಯೆಯಾಗಿ, ಇಬ್ಬರು ತೀವ್ರವಾಗಿ ಗಾಯಗೊಂಡ ಪ್ರಕರಣ ಇದಾಗಿದೆ.

ಹತ್ಯೆಯಾದ ವ್ಯಕ್ತಿಯ ಹತ್ತಿರದ ಬಂಧುಗಳಿಗೆ ರೂ 20 ಸಾವಿರ ಮತ್ತು ಗಾಯಗೊಂಡ ವ್ಯಕ್ತಿಗಳಿಗೆ ತಲಾ ರೂ 10 ಸಾವಿರ ಪರಿಹಾರ ನೀಡುವಂತೆಯೂ ಕೋರ್ಟ್ ಆದೇಶಿಸಿದೆ.

ಅಲಹಾಬಾದ್ ಹೈಕೋರ್ಟ್ ನಿರ್ದೇಶನದಂತೆ ಈ ಪ್ರಕರಣದ ತನಿಖೆಯನ್ನು ಸಿಬಿಐ 1995ರ ಜನವರಿ 25ರಂದು ತೆಗೆದುಕೊಂಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.