ಶನಿವಾರ, ಜನವರಿ 18, 2020
19 °C

ನಾಲ್ವರು ಸಾಧಕಿಯರಿಗೆ ಗೌರವ ಡಾಕ್ಟರೇಟ್ ಪ್ರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಾಪುರ: ಇಲ್ಲಿಯ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದಿಂದ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ, ಖ್ಯಾತ ರಂಗಭೂಮಿ ನಟಿ ಆರುಂಧತಿ ನಾಗ್, ಅಂತರರಾಷ್ಟ್ರೀಯ ಕ್ರೀಡಾಪಟು ಅಶ್ವಿನಿ ನಾಚಪ್ಪ, ಹೃದಯ ರೋಗ ತಜ್ಞೆ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.ಭಾನುವಾರ ಇಲ್ಲಿ ನಡೆದ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಹಾಗೂ ಉನ್ನತ ಶಿಕ್ಷಣ ಸಚಿವರ ಅನುಪಸ್ಥಿತಿಯಲ್ಲಿ ಕುಲಪತಿ ಡಾ.ಗೀತಾ ಬಾಲಿ ಅವರು ಈ ಸಾಧಕಿಯರಿಗೆ ಪದವಿ ಪ್ರದಾನ ಮಾಡಿದರು.

ಇವರ ಜೊತೆಗೆ 29 ವಿದ್ಯಾರ್ಥಿನಿಯರಿಗೆ 33 ಚಿನ್ನದ ಪದಕ ಪ್ರದಾನ ಮಾಡಲಾಯಿತು.ಮಾಜಿ ರಾಜ್ಯಪಾಲರಾದ ವಿ.ಎಸ್. ರಮಾದೇವಿ ಘಟಿಕೋತ್ಸವ ಭಾಷಣ ಮಾಡಿದರು.ಕುಲಸಚಿವ ಡಾ.ಜಿ.ಆರ್. ನಾಯಕ, ಮೌಲ್ಯಮಾಪನ ಕುಲಸಚಿವೆ ಡಾ.ತೇಜಾವತಿ  ಪಾಲ್ಗೊಂಡಿದ್ದರು.

ಪ್ರತಿಕ್ರಿಯಿಸಿ (+)