ಬೆಂಗಳೂರು: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ಇದೇ 18ರಿಂದ 25ರ ವರೆಗೆ ನಡೆಯಲಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಶಾಂತಿಯುತವಾಗಿ ಪರೀಕ್ಷೆ ನಡೆಸಲು ವ್ಯಾಪಕ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಪರೀಕ್ಷಾ ಕೇಂದ್ರದ ಆಸುಪಾಸಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ.

ಪರೀಕ್ಷಾ ಸಮಯದಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾರ್ವಜನಿಕ ಸಭೆ, ಸಮಾರಂಭ, ಧ್ವನಿವರ್ಧಕಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿತ ಪರೀಕ್ಷಾ ಸಿಬ್ಬಂದಿ/ಅಧಿಕಾರಿಗಳನ್ನು ಹೊರತುಪಡಿಸಿ ಬೇರೆ ವ್ಯಕ್ತಿಗಳಿಗೆ ಪ್ರವೇಶ ಇಲ್ಲ. ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಖಾಸಗಿ ಅಭ್ಯರ್ಥಿಗಳ ಒಂದು ಪರೀಕ್ಷಾ ಕೇಂದ್ರ ಸೇರಿದಂತೆ 9 ಪರೀಕ್ಷಾ ಕೇಂದ್ರಗಳಲ್ಲಿ 2,500 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಎಲ್ಲಾ ವಿದ್ಯಾರ್ಥಿಗಳಿಗೂ ಆಯಾ ಶಾಲೆಯ ಮುಖ್ಯ ಶಿಕ್ಷಕರ ಮೂಲಕ ಪರೀಕ್ಷಾ ಪ್ರವೇಶ ಪತ್ರ ನೀಡಲಾಗಿದೆ.

ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಟೌನ್ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯನ್ನು ನಾಲ್ಕು ತಾಲ್ಲೂಕುಗಳ ಖಾಸಗಿ ಅಭ್ಯರ್ಥಿಗಳ ಪರೀಕ್ಷಾ ಕೇಂದ್ರವನ್ನಾಗಿ ಮಾಡಲಾಗಿದೆ. ನಾಲ್ಕು ತಾಲ್ಲೂಕುಗಳ ಖಾಸಗಿ ಅಭ್ಯರ್ಥಿಗಳು ಈ ಕೇಂದ್ರದಲ್ಲೇ ಪರೀಕ್ಷೆ ಬರೆಯಬೇಕು. ಪ್ರಥಮ ಭಾಷೆ ಮತ್ತು ಮುಖ್ಯ ವಿಷಯಕ್ಕೆ ಸಂಬಂಧಿಸಿದ ಪರೀಕ್ಷೆಗಳು ಬೆಳಿಗ್ಗೆ 9.30 ರಿಂದ 12.45ರ ವರೆಗೆ, ದ್ವಿತೀಯ ಭಾಷೆ ಮತ್ತು ತೃತೀಯ ಭಾಷೆಯ ಪರೀಕ್ಷೆಗಳು ಬೆಳಿಗ್ಗೆ 9.30 ರಿಂದ 12.15 ರ ವರೆಗೆ ನಡೆಯಲಿವೆ. ಕಳೆದ ವರ್ಷ ಪರೀಕ್ಷೆ ಬೆಳಿಗ್ಗೆ 10.30ಕ್ಕೆ ಆರಂಭಗೊಳ್ಳುತ್ತಿತ್ತು. ಈ ಬಾರಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

ಪರೀಕ್ಷಾ ಕೇಂದ್ರವಿರುವ ಶಾಲೆಗಳಲ್ಲಿ ತರಗತಿಗಳು ಬೆಳಿಗ್ಗೆ 10 ರಿಂದ ಸಂಜೆ 4.15 ರ ಬದಲು ಮಧ್ಯಾಹ್ನ ಒಂದರಿಂದ ಸಂಜೆ 5.30 ರ ವರೆಗೆ ನಡೆಸಲಾಗುವುದು. ಮಧ್ಯೆ ಬಿಸಿಯೂಟಕ್ಕೆ 30 ನಿಮಿಷ ಬಿಡುವು ನೀಡಲು ಮುಖ್ಯ ಶಿಕ್ಷಕರಿಗೆ ಸೂಚಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎಸ್.ಶಂಕರನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

18ರಂದು ಗಣಿತ, ಭಾರತೀಯ ಸಮಾಜಶಾಸ್ತ್ರ, 19ರಂದು ಪ್ರಥಮ ಭಾಷೆ, 20ರಂದು ವಿಜ್ಞಾನ, ಭಾರತೀಯ ರಾಜ್ಯಶಾಸ್ತ್ರ ಮತ್ತು ಪೌರನೀತಿ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ (ಮಧ್ಯಾಹ್ನ 2ರಿಂದ), 21ರಂದು ದ್ವಿತೀಯ ಭಾಷೆ, 22ರಂದು ಸಮಾಜ ವಿಜ್ಞಾನ, 23ರಂದು ಭಾರತೀಯ ಅರ್ಥಶಾಸ್ತ್ರ, ಎಲಿಮೆಂಟ್ಸ್ ಆಫ್ ಎಂಜಿನಿಯರಿಂಗ್, ಎಂಜಿನಿಯರಿಂಗ್ ಡ್ರಾಯಿಂಗ್ (ಮಧ್ಯಾಹ್ನ 2ರಿಂದ), ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, 25ರಂದು ತೃತೀಯ ಭಾಷೆ ಪರೀಕ್ಷೆ ನಡೆಯಲಿದೆ ಎಂದು ಡಿಡಿಪಿಐ ಎಚ್.ವಿ. ವೆಂಕಟೇಶಪ್ಪ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.