ನಾಳೆಯಿಂದ ಜೈಲ್ ಭರೊ

7

ನಾಳೆಯಿಂದ ಜೈಲ್ ಭರೊ

Published:
Updated:

ಮಂಡ್ಯ: ನಗರದ ಗಾಂಧಿ ಭವನದಲ್ಲಿ ಸೋಮವಾರ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ವತಿಯಿಂದ ನಡೆದ ಕಾವೇರಿ ಕಣಿವೆಯ ಶಾಸಕರು, ಸಂಸದರು, ಮಾಜಿ ಜನಪ್ರತಿನಿಧಿಗಳು ಹಾಗೂ ಸಂಘಟನೆಗಳ ಪ್ರತಿನಿಧಿಗಳ ಸಭೆಯಲ್ಲಿ ಈ ಕೆಳಗಿನ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಅ.3 ರಂದು ಕೆಆರ್‌ಎಸ್ ಅಣೆಕಟ್ಟೆಗೆ ಮುತ್ತಿಗೆ ಹಾಗೂ ಜೈಲ್‌ಭರೋ.ನೀರು ಬಿಡುವುದರಿಂದ ರೈತರಿಗೆ ಆಗುವ ನಷ್ಟ ಭರಿಸುವ ಹೊಣೆಯನ್ನು ರಾಜ್ಯ ಸರ್ಕಾರ ಹೊರಬೇಕು.ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಶೀಘ್ರದಲ್ಲಿ ಸಭೆ ನಡೆಸಿ, ಮುಂದಿನ ಕಾರ್ಯತಂತ್ರ ರೂಪಿಸಬೇಕು.ಕಾವೇರಿ ನದಿ ಪ್ರಾಧಿಕಾರ ಕೂಡಲೇ ನೀರು ಬಿಡುವುದನ್ನು ತಡೆದು, ಪರಿಸ್ಥಿತಿ ಅಧ್ಯಯನಕ್ಕೆ ತಂಡ ಕಳುಹಿಸಬೇಕುಕಾವೇರಿ ಕಣಿವೆಯ ಸಂಸದರು, ಶಾಸಕರೂ ರಾಜೀನಾಮೆ ನೀಡಬೇಕು.ಕಾನೂನು ಹೋರಾಟಕ್ಕೂ ಮುಂದಾಗಬೇಕು.ಜಿ.ಮಾದೇಗೌಡರ ಅಧ್ಯಕ್ಷತೆಯಲ್ಲಿ ನಡೆಸ ಸಭೆಯಲ್ಲಿ ಸಂಸದ ಎನ್.ಚಲುವರಾಯಸ್ವಾಮಿ, ಶಾಸಕರಾದ ಅನಿತಾ ಕುಮಾರಸ್ವಾಮಿ, ಎಂ.ಟಿ.ಕೃಷ್ಣಪ್ಪ, ಡಾ.ಹುಲಿ ನಾಯ್ಕರ್, ಸಿ.ಎಸ್.ಪುಟ್ಟರಾಜು, ಎಂ.ಶ್ರೀನಿವಾಸ್, ಬಿ. ರಾಮಕೃಷ್ಣ, ರಮೇಶಬಾಬು ಬಂಡಿಸಿದ್ದೇಗೌಡ, ಕಲ್ಪನಾ ಸಿದ್ದರಾಜು, ಕರವೇ ರಾಜ್ಯ ಘಟಕದ ಅಧ್ಯಕ್ಷ ಟಿ.ಎ. ನಾರಾಯಣಗೌಡ, ಮಾಜಿ ಸಚಿವರು, ಶಾಸಕರೂ, ವಿವಿಧ ಸಂಘಟನೆಗಳ ಮುಖಂಡರೂ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry