ನಾಳೆಯಿಂದ ರಾಜ್ಯ ಅಥ್ಲೆಟಿಕ್ಸ್

ಸೋಮವಾರ, ಜೂಲೈ 22, 2019
24 °C

ನಾಳೆಯಿಂದ ರಾಜ್ಯ ಅಥ್ಲೆಟಿಕ್ಸ್

Published:
Updated:

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಥ್ಲೆಟಿಕ್ ಸಂಸ್ಥೆ ಆಶ್ರಯದಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ನಡೆಯುವ 24ನೇ ರಾಜ್ಯ ಜೂನಿಯರ್ ಮತ್ತು ಸೀನಿಯರ್ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ಗೆ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಸಿದ್ಧತೆಗಳು ನಡೆದಿವೆ.ಈ ಕೂಟದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 1,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಭಾಗವಹಿಸುತ್ತಿರುವ ಕ್ರೀಡಾಪಟುಗಳಿಗೆ ಕ್ರೀಡಾಂಗಣದ ಬಳಿಯಲ್ಲೇ ಉಚಿತ ಊಟ         ಮತ್ತು ವಸತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಸಂಘಟನಾ ಸಮಿತಿಯ ಅಧ್ಯಕ್ಷ ಎ.ಮುನಿಸಂಜೀವಪ್ಪ ತಿಳಿಸಿದ್ದಾರೆ.ಜೂನಿಯರ್ ವಿಭಾಗದ 14, 16, 18, 20 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಗುಂಪುಗಳಲ್ಲಿನ ಅತ್ಯುತ್ತಮ ಅಥ್ಲೀಟ್‌ಗಳಿಗೆ ನಗದು ಬಹುಮಾನ ನೀಡಲಾಗುವುದು ಎಂದೂ ಅವರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry